Breaking News

ಗೋಹತ್ಯೆ ನಿಷೇಧ ಮಸೂದೆಗೆ ಸುಗ್ರೀವಾಜ್ಞೆ ಹೊರಡಿಸಲು ಬಿಜೆಪಿ ಸಿದ್ಧತೆ..!

Spread the love

ಬೆಂಗಳೂರು,ಡಿ.16- ಗೋಹತ್ಯೆ ನಿಷೇಧ ಮಸೂದೆಗೆ ವಿಧಾನಪರಿಷತ್‍ನಲ್ಲಿ ಅಂಗೀಕಾರ ಪಡೆಯುವಲ್ಲಿ ವಿಫಲವಾಗಿರುವ ಕಾರಣ ಸುಗ್ರೀವಾಜ್ಞೆ ಮೂಲಕ ಮಸೂದೆಯನ್ನು ಜಾರಿಗೊಳಿಸಲು ಆಡಳಿತಾರೂಢ ಬಿಜೆಪಿ ಮುಂದಾಗಿದೆ. ವಿಧಾನಪರಿಷತ್ತಿನಲ್ಲಿ ವಿಧೇಯಕ ಅಂಗೀಕಾರಕ್ಕೆ ಅಡ್ಡಿ ಉಂಟಾದ ಕಾರಣಕ್ಕೆ ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಹಸು, ಕರು ಮತ್ತು ಎಮ್ಮೆ ಸೇರಿದಂತೆ ದನಗಳನ್ನು ಅಕ್ರಮವಾಗಿ ಮಾರಾಟ ಮಾಡುವುದು, ಖರೀದಿಸುವುದು ಮತ್ತು ಸಾಗಿಸುವುದನ್ನು ನಿಷೇಧಿಸುವ ಮಸೂದೆಯನ್ನು ಕಳೆದ ವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿತ್ತು. ವಿಧಾನಸಭೆಯಲ್ಲಿ ಅಂಗೀಕಾರವಾಗಿರುವ ಗೋಹತ್ಯೆ ನಿಷೇಧ ಕಾಯ್ದೆ ಇನ್ನೂ ವಿಧಾನ ಪರಿಷತ್‍ನಲ್ಲಿ ಮಂಡನೆಯಾಗಿಲ್ಲ. ಈ ಮೂಲಕ ವಿಧಾನಸಭೆಯಲ್ಲಿ ದಿಢೀರ್ ಎಂದು ಗೋಹತ್ಯೆ ನಿಷೇಧ ವಿಧೇಯಕವನ್ನು ಮಂಡನೆ ಮಾಡಿದ್ದ ರಾಜ್ಯ ಸರ್ಕಾರದ ಲೆಕ್ಕಾಚಾರ ವಿಧಾನ ಪರಿಷತ್‍ನಲ್ಲಿ ತಲೆ ಕೆಳಗಾಗಿದೆ.ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಪರಿಷತ್ ಸಭಾಪತಿ ಪ್ರತಾಶ್ಚಂದ್ರ ಶೆಟ್ಟಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಮೂಲಕ ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞಾ ಮೂಲಕ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ