Breaking News

ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಂದು ಕೋಟಿ!

Spread the love

ನವದೆಹಲಿ,ಡಿ.16-ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಂದು ಕೋಟಿಯತ್ತ ಮುಖ ಮಾಡಿದೆ. ಕಳೆದ 24 ಗಂಟೆಗಳಲ್ಲಿ 26,382 ಹೊಸ ಪ್ರಕರಣಗಳು ಕಾಣಿಸಿಕೊಳ್ಳುವ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 99.32ಲಕ್ಷಕ್ಕೆ ಏರಿಕೆಯಾಗಿದೆ.

99 ಲಕ್ಷ ಮಂದಿಯಲ್ಲಿ ಈಗಾಗಲೇ 95 ಲಕ್ಷ ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಂಕಿ ಅಂಶಗಳು ಬಹಿರಂಗಗೊಳಿಸಿದೆ. ಸೋಂಕಿತರ ಸಂಖ್ಯೆ 99.32,547 ಕ್ಕೆ ಏರಿಕೆಯಾಗಿದ್ದು, ನಿನ್ನೆಯಿಂದೀಚೆಗೆ 387 ಹೊಸ ಸಾವು ಪ್ರಕರಣದಿಂದ ಇದುವರೆಗೂ ಮಹಾ ಮಾರಿಗೆ ಬಲಿಯಾದವರ ಸಂಖ್ಯೆ 1,44,096ಕ್ಕೆ ಹೆಚ್ಚಳವಾಗಿದೆ.ಕೊರೊನಾ ಲಸಿಕೆ ಬರುವ ಮೊದಲೆ ಸೋಂಕು ಕ್ಷೀಣಿಸತೊಡಗಿದೆ. 99 ಲಕ್ಷ ಮಂದಿಯಲ್ಲಿ 95 ಲಕ್ಷ ಮಂದಿ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ.95.21ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ ಶೇ.1.45ಕ್ಕೆ ಸೀಮಿತಗೊಂಡಿದೆ.


Spread the love

About Laxminews 24x7

Check Also

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಕಣದಿಂದ ಹಿಂದೆ ಸರಿದ ಸಚಿವೆ ಹೆಬ್ಬಾಳ್ಕರ್ ಸಹೋದರ

Spread the loveಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಇನ್ನೂ 52 ದಿನ ಬಾಕಿ ಇದೆ. ಆದರೆ, ಚುನಾವಣಾ ಕಣ ಈಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ