ಬೆಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ. ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಯಂತೆ 1 ಲಕ್ಷ ಪಟ್ಟಾ ಖಾತೆ ಹಂಚಿಕೆ ಮಾಡಲಾಗುತ್ತಿದೆ. ಇದು ಕೇವಲ ಸರ್ಕಾರದ ಸಂಭ್ರಮಾಚರಣೆ ಮಾತ್ರವಲ್ಲ, ಇಡೀ ರಾಜ್ಯದ ಜನ ಸಂಭ್ರಮಿಸುವ ಕ್ಷಣ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಸ ವ್ಯಕ್ತಪಡಿಸಿದರು.
ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, “ಮೇ 20ರಂದು ವಿಜಯನಗರದಲ್ಲಿ ಸರ್ಕಾರದ ಎರಡು ವರ್ಷಗಳ ಸಂಭ್ರಮಾಚರಣೆ ನಡೆಯುತ್ತದೆ. ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆಯ ಸಂಭ್ರಮವನ್ನು ಮುಂದೂಡಲು ಆಲೋಚಿಸಿದ್ದೆವು. ಆದರೆ ಈಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿದ್ದೇವೆ. ಐದಾರು ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಕರ್ತರು ಹಾಗೂ ಅಧಿಕಾರಿಗಳ ಸಭೆ ಮಾಡಲು ತಿಳಿಸಿದ್ದೇವೆ” ಎಂದು ತಿಳಿಸಿದರು”ಕಂದಾಯ ಇಲಾಖೆಯಿಂದ 1 ಲಕ್ಷ ಪಟ್ಟಾ ಖಾತೆಗಳನ್ನು ನೀಡಬೇಕು ಎಂದು ತೀರ್ಮಾನಿಸಲಾಗಿದೆ. ಇದು ನಮ್ಮ ಪ್ರಣಾಳಿಕೆಯ ಭಾಗವಾಗಿತ್ತು, ಮಾಡುತ್ತಿದ್ದೇವೆ. ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರನ್ನೂ ಆಹ್ವಾನಿಸುತ್ತೇವೆ” ಎಂದು ಹೇಳಿದರು.
Laxmi News 24×7