Breaking News

ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ: ದೂರು ದಾಖಲಾಗುತ್ತಿದ್ದಂತೆಯೇ ಬಿಜೆಪಿಯಿಂದ ಉಚ್ಛಾಟನೆ

Spread the love

ಮಂಗಳೂರು, (ಮೇ 12): ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು‌ ಗ್ರಾಮದಲ್ಲಿ ನಡೆದಿದೆ. ರಸ್ತೆ ವಿವಾದ ಸಂಬಂಧ ಮಹಿಳೆ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ತನ್ನ ಗುಪ್ತಾಂಗ ತೋರಿಸಿದ್ದಾನೆ.

ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಪಲ್ಯನನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

ಮಹಿಳೆ ನೀಡಿದ ದೂರಿನಲ್ಲೇನಿದೆ?

ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಲೆ ತನ್ನ ಮನೆಗೆ ಬರುದ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ಧ ಕೇಳಿ ಬಂದಿದೆ. ಹೀಗಾಗಿ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದು, ಇದನ್ನು ನೋಡಿದ ಪದ್ಮನಾಭ ತನ್ನ ಚಡ್ಡಿಯನ್ನು ಕೆಳಗೆ ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಬಿಎನ್​ಎಸ್​ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಆರ್​​ಎಸ್​​ಎಸ್ ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ : ಶೆಟ್ಟರ್

Spread the loveಹುಬ್ಬಳ್ಳಿ : ಆರ್​​ಎಸ್​​ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ