Breaking News

ರೈತರು ಮತ್ತೆ ಪ್ರತಿಭಟನೆ ಆರಂಭಿಸಿದರೆ ಇನ್ನೊಂದೆಡೆ ಖಾಸಗಿ ಶಾಲಾ ಶಿಕ್ಷಕರು ಧರಣಿ ನಡೆಸುತ್ತಿದಾರೆ.

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ರೈತರು ಮತ್ತೆ ಪ್ರತಿಭಟನೆ ಆರಂಭಿಸಿದರೆ ಇನ್ನೊಂದೆಡೆ ಖಾಸಗಿ ಶಾಲಾ ಶಿಕ್ಷಕರು ಧರಣಿ ನಡೆಸುತ್ತಿದಾರೆ.

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ, ಶಿಕ್ಷಕರನ್ನು ಕೊರೊನಾ ಯೋಧರೆಂದು ಪರಿಗಣಿಸಬೇಕು, ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜಧಾನಿಯಲ್ಲಿ ಶಿಕ್ಷಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ಪ್ರತಿಭಟನಾ ರ್ಯಾಲಿ ಬಳಿಕ ಶಿಕ್ಷಕರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದು, ಬಸವರಾಜ್ ಹೊರಟ್ಟಿ ಕೂಡ ಶಿಕ್ಷಕರಿಗೆ ಸಾಥ್ ನೀಡಿದ್ದಾರೆ. ಈ ನಡುವೆ ಪ್ರತಿಭಟನಾ ಸ್ಥಳಕ್ಕೆ ಸಚಿವರಾದ ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದು ಧರಣಿ ಹಿಂಪಡೆಯುವಂತೆ ಶಿಕ್ಷಕರ ಮನವೊಲಿಕೆ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the loveಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ