Breaking News

ರೌಡಿಶೀಟರ್ ಕಣುಮನ ಕೊಲೆ ಪ್ರಕರಣದಲ್ಲಿ 20 ಜನರ ಬಂಧನ;S.P.

Spread the love

ದಾವಣಗೆರೆ: ವೈಯಕ್ತಿಕ ದ್ವೇಷ ಹಾಗೂ ಹಣಕಾಸಿನ ವ್ಯವಹಾರ ಸಂಬಂಧ ರೌಡಿಶೀಟರ್ ಸಂತೋಷ್ ಕುಮಾರ್ ಆಲಿಯಾಸ್ ಕಣುಮ ಕೊಲೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಒಟ್ಟು 20 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಲೆ ಮಾಡಿದವರು ಸೇರಿ 10 ಮಂದಿಯನ್ನು ಈಗಾಗಲೇ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದರು. ಇದೀಗ ಘಟನೆ ಸಂಬಂಧ ಒಟ್ಟು 20 ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದೇವೆ. ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಹೆಚ್ಚಿನ ತನಿಖೆ ಮಾಡಬೇಕಿದೆ ಎಂದರು.ವೈಯಕ್ತಿಕ ದ್ವೇಷ ಮತ್ತು ಹಣಕಾಸಿನ ವ್ಯವಹಾರದಲ್ಲಿ ಜಗಳದ ಕಾರಣದಿಂದ ಆರೋಪಿಗಳು ಕೊಲೆ ಮಾಡಿದ್ದಾರೆ. ಕೆಲವರು ಘಟನಾ ಸ್ಥಳಕ್ಕಾಗಮಿಸಿ ಕೊಲೆ ಮಾಡಿದ್ದಾರೆ. ಚಾವಳಿ ಸಂತು ಈ ಕೊಲೆಯ ಪ್ರಮುಖ ಆರೋಪಿಯಾಗಿದ್ದಾನೆ. ಕೆಲ ವಿಚಾರಕ್ಕೆ ನಮ್ಮ ಮೇಲೆ ದಬ್ಬಾಳಿಕೆ ಮಾಡ್ತಿದ್ದರಿಂದ ಕೊಲೆ ಮಾಡಿದ್ದೇವೆ ಎಂದು ಚಾವಳಿ ಸಂತು ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ