Breaking News

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಹುಬ್ಬಳ್ಳಿಯಲ್ಲೂ ರೈತರಿಂದ ಪ್ರತಿಭಟನೆ

Spread the love

ಹುಬ್ಬಳ್ಳಿ; ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಹುಬ್ಬಳ್ಳಿಯಲ್ಲೂ ರೈತರಿಂದ ಪ್ರತಿಭಟನೆ ನಡೆಸಲಾಗುತ್ತಿದೆ.  ಶಿರಗುಪ್ಪಿ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ಮಾಡಿದ್ದು, ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೈಬಿಡಲು ಒತ್ತಾಯಿಸಲಾಗಿದೆ. ರೈತರು ಹೆದ್ದಾರಿ ಮಧ್ಯ ಟ್ರ್ಯಾಕ್ಟರ್ ನಿಲ್ಲಿಸಿ ರಸ್ತೆ ತಡೆ ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರೈತರ ಬೇಡಿಕೆಗಳನ್ನು ಮೋದಿಯವರ ಸರ್ಕಾರ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ. ರೈತ ಮುಖಂಡರಾದ ಶಿವಣ್ಣ ಹುಬ್ಬಳ್ಳಿ, ಅಮೃತ ಇಜಾರಿ, ಮಹೇಶ ಪತ್ತಾರ, ಗುರಣ್ಣ ದೇಸಾಯಿ, ಗುರನಗೌಡ ಬೆಳವಟಗಿ ಸೇರಿದಂತೆ ಶಿರಗುಪ್ಪಿ ಗ್ರಾಮದ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ನಡುವೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಇದುವರೆಗೆ ನಡೆದ 6 ಸುತ್ತಿನ ಸಭೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸಿದ ಅನೌಪಚಾರಿಕ ಮಾತುಕತೆಗಳೆಲ್ಲವೂ ವಿಫಲವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆ 21ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 35 ಪ್ರತಿನಿಧಿಗಳ‌ ನಡುವೆ ಈವರೆಗೆ 6 ಸಭೆಗಳು ನಡೆದಿವೆ. ಅಮಿತ್ ಶಾ ರೈತ ಸಂಘಟನೆಗಳ 13 ಪ್ರತಿನಿಧಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ್ದಾರೆ. ಆದರೆ ಪ್ರಭಾವಿ ಅಮಿತ್ ಶಾ ಆಗಲಿ, ಇತರೆ ಕೇಂದ್ರ ಸಚಿವರಾಗಲಿ ರೈತರನ್ನು ಮನವೊಲಿಸಲು ಸಫಲರಾಗಿಲ್ಲ. ಇದರಿಂದ ಮಾತುಕತೆಯಿಂದ ಸಮಸ್ಯೆ ಬಗೆಹರಿಯುವ ಸಾಧ್ಯತೆ ಕ್ಷೀಣಿಸಿದ್ದು ರೈತರು ಪ್ರತಿಭಟನೆ ಮುಂದುವರೆಸುತ್ತಿದ್ದಾರೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ