Breaking News

ಮೂರು ತಿಂಗಳಾದರೂ ಬಂದಿಲ್ಲ ಗೃಹಲಕ್ಷ್ಮಿ ಹಣ

Spread the love

ಗದಗ, ಮೇ 15: ಕರ್ನಾಟಕ ಕಾಂಗ್ರೆಸ್ ಸರ್ಕಾರದ (Congress Govt) ವಿರುದ್ಧ ಗದಗದಲ್ಲಿ (Gadag)  ಗೃಹಲಕ್ಷ್ಮೀಯರು ಗರಂ ಆಗಿದ್ದಾರೆ. ಮೂರು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬ್ಯಾಂಕ್ ಖಾತೆಗೆ ಬಂದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಉಚಿತ ಯೋಜನೆಗಳ ಭವರಸೆ ಕೊಟ್ಟು ಅಧಿಕಾರದ ಚುಕ್ಕಾಣಿ ಹಿಡಿದು ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ನುಡಿದಂತೆ ನಡಯದಿದ್ದರೆ ಮುಂದೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಫಲಾನುಭವಿಗಳು, ಸಿಎಂ ಸಿದ್ಧರಾಮಯ್ಯನವರು ಪದೇ ಪದೇ, ‘‘ನಮ್ಮದು ನುಡಿದಂತೆ ನಡೆದ ಸರ್ಕಾರ’’ ಎನ್ನುತ್ತಾರೆ. ಆದರೆ, ಚುನಾವಣೆ ಸಂದರ್ಭ ಪ್ರತಿ ತಿಂಗಳು ಹಣ ವರ್ಗಾವಣೆ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಮೂರು ತಿಂಗಳಾದರೂ ಹಣ ಬಂದಿಲ್ಲ. ಎಲ್ಲಿದೆ ನುಡಿದಂತೆ ನಡೆದ ಸರ್ಕಾರ ಎಂದು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ

ಗ್ಯಾರಂಟಿ ಯೋಜನೆಗಳನ್ನು ನೀಡಿ ಎಂದು ಯಾರೂ ಕೇಳಿಲ್ಲ. ಚುನಾವಣೆಯಲ್ಲಿ ಭರವಸೆ ನೀಡಿ ಮೋಸ ಮಾಡಿದ್ದಾರೆ ಎಂದು ಮಹಿಳೆಯರು ಕಿಡಿಕಾರಿದ್ದಾರೆ. ಸರ್ಕಾರದ ಹಣದ ಮೇಲೆ ಅವಲಂಬಿತರಾಗಿದ್ದೆವು. ಈಗ ಹಣ ಕೊಡದೇ ಇರುವುದರಿಂದ ಮನೆ ನಿರ್ವಹಣೆ, ಮಕ್ಕಳ ಶಿಕ್ಷಣಕ್ಕೂ ಹೊಡೆತ ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ

Spread the love ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ, ಸಮಾಜದ ಭವಿಷ್ಯ ಕಟ್ಟುವ ಮಹಾಯಜ್ಞ. ಒಬ್ಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ