ನವಲಗುಂದ ಪಟ್ಟಣದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್… ರಾಜ್ಯ ಸರ್ಕಾರ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಕೇಂದ್ರ ಸಚಿವ ಜೋಶಿ ಅಗ್ರಹ
ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಲಾದ ಜೋಶಿ ತಿಳಿಸಿದ್ದಾರೆ.
ಈ ಕುರಿತು ಸೊಸಿಯಲ್ ಮೀಡೊಯಾದಲ್ಲಿ ಮಾಹಿತಿ ಹಂಚಿಕೊಂಡರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಈ ಬೈಪಾಸ್ ಸಂಬಂಧ ಸಲ್ಲಿಸಿದ್ದ ಜೋಡಣೆ ಮತ್ತು ವಿವರವಾದ ಯೋಜನಾ ವರದಿಗೆ ಸಚಿವಾಲಯದ ಉನ್ನತ ಸಮಿತಿ ಅನುಮೋದನೆ ನೀಡಿದೆ. ನವಲಗುಂದ ಪಟ್ಟಣಕ್ಕೆ 10.575 ಕಿ.ಮೀ. ಉದ್ದದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ. ಬೆಣ್ಣೆಹಳ್ಳ ಮತ್ತು ಅದನ್ನು ಸೇರುವ ಸಣ್ಣನಾಲಾಗಳು ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಪರಿಸ್ಥಿತಿ ಎದುರಾಗುತ್ತಿತ್ತು.
ಇದರಿಂದ ಕೃಷಿ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸುತ್ತಿತ್ತು ಮತ್ತು ಅನೇಕ ಕಡೆ ಸಂಪರ್ಕ ಕಡಿತಗೊಳ್ಳುತ್ತಿತ್ತು. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಬೈಪಾಸ್ ನಿರ್ಮಾಣಕ್ಕೆ ಪ್ರಯತ್ನ ನಡೆಸಲಾಗಿತ್ತು ಎಂದು ಅವರು ಹೇಳಿದ್ದಾರೆ.
Laxmi News 24×7