Breaking News

ಮದ್ಯಪ್ರಿಯರಿಗೆ 3ನೇ ಬಾರಿ ದರ ಏರಿಕೆ ಶಾಕ್

Spread the love

ಬೆಂಗಳೂರು, (ಮೇ 15): ಕರ್ನಾಟಕದಲ್ಲಿ (Karnataka) ಮತ್ತೆ ಐಎಂಎಲ್ (ಮದ್ಯ) ಮೇಲಿನ ದರ ಏರಿಕೆ ಆಗಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಮದ್ಯದ(Liquor) ದರ ಹೆಚ್ಚಳ ಮಾಡಲಾಗಿತ್ತು, ಇದೀಗ ಮತ್ತೆ ಮೂರನೇ ಬಾರಿ ದರ ಹೆಚ್ಚಳವಾಗಿದ್ದು,

ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಕಾರಣ 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ ಬಾರಿಯ ಬಜೆಟ್‌ನಲ್ಲಿ 40 ಸಾವಿರ ಕೋಟಿ ಟಾರ್ಗೆಟ್ ನೀಡಲಾಗಿದೆ ಅಂದರೆ ಈ ಸಾಲಿನಲ್ಲಿ ಹೆಚ್ಚುವರಿಯಾಗಿ 1400 ಕೋಟಿ ರೂಪಾಯಿ ಟಾರ್ಗೆಟ್ ನೀಡಿದ್ದು,  ಈ ಹೊಸ ಟಾರ್ಗೆಟ್ ರೀಚ್ ಮಾಡಲು ಅಬಕಾರಿ ಇಲಾಖೆ ಮತ್ತೆ ದರ ಹೆಚ್ಚಳ ಮಾಡಲು ಮುಂದಾಗಿದೆ.

ಇವತ್ತಿನಿಂದಲೇ ಎಲ್ಲಾ ರೀತಿಯ ಐಎಂಎಲ್ ಗಳ ಮೇಲೆ 10% ರಿಂದ 20 ರಷ್ಟು ಏರಿಕೆ ಆಗಿದೆ.ಇನ್ನೂ ಈಗಾಗಲೇ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು,16 ಸ್ಲ್ಯಾಬ್ ಗಳಲ್ಲಿ 1 ರಿಂದ 4 ಸ್ಲ್ಯಾಬ್ ಗಳ ಮೇಲೆ ದರ ಏರಿಕೆ ಏರಿಕೆ ಮಾಡಿರುವ ಅಬಕಾರಿ ಇಲಾಖೆ. ಸ್ಯ್ಲಾಬ್-1, ಒಂದು ಕ್ವಾರ್ಟರ್ 65 ರೂಪಾಯಿ ಇದ್ದು ಅದರ ಮೇಲೆ 15 ರೂಪಾಯಿ ಏರಿಕೆ ಆಗಿದೆ. ಸ್ಲ್ಯಾಬ್- 2, 80 ರೂಪಾಯಿ ಇದ್ದು, ಅದರ ಮೇಲೆ 15 ರೂಪಾಯಿ ಏರಿಕೆ ಆಗಿದೆ. ಇನ್ನು ಸ್ಲ್ಯಾಬ್- 3, 120 ರೂಪಾಯಿ ಇದ್ದು, ಅದರ ಮೇಲೆ 10 ರಿಂದ 15 ರೂಪಾಯಿ ಏರಿಕೆ ಆಗಿದೆ. ಇನ್ನು ಸ್ಲ್ಯಾಬ್- 4, 130rಊ. ಇದ್ದು ಅದರ ಮೇಲೆ 10 ರಿಂದ 15 ರೂಪಾಯಿ ಏರಿಕೆಯಾಗಿದೆ.

ಒಂದು ಕ್ವಾರ್ಟರ್ ಮೇಲೆ 10 ರಿಂದ 25 ರೂಪಾಯಿ ದರ ಏರಿಕೆ ಆದರೆ ಒಂದು ಫುಲ್ ಬಾಟಲ್ ಮೇಲೆ 50 ರಿಂದ 100 ರೂಪಾಯಿ ವರೆಗೆ ಏರಿಕೆ ಆಗಿದೆ. ಇದು ಕೇವಲ ಎಂಆರ್​ಪಿ ದರ ಮಾತ್ರ. ಬಾರ್ ಆ್ಯಂಡ್​ ರೆಸ್ಟೋರೆಂಟ್ ನಲ್ಲಿ ಈ ದರದ ಮೇಲೆ 10 ರಿಂದ 15 ರೂಪಾಯಿವರೆಗೆ ಮತ್ತೆ ಹೆಚ್ಚುವರಿ ಕೊಡಬೇಕಾಗುತ್ತದೆ. ಈ ಬಗ್ಗೆ ಮದ್ಯ ಪ್ರಿಯರು ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ