ಧಾರವಾಡ: ರಾಜ್ಯ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಮತ್ತು ಮೊರಬ ಗ್ರಾಮಗಳ ರಸ್ತೆಯ ಮಧ್ಯ ಸಂಭವಿಸಿದೆ.
ನವಲಗುಂದ ತಾಲೂಕಿನ ಹನಸಿ ಗ್ರಾಮದಿಂದ ಧಾರವಾಡದತ್ತ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ಹೊಲದೊಳಗೆ ನುಗ್ಗಿದೆ. ಕೆಲವರು ಕಿಡಕಿಯಿಂದ ಜಿಗಿದು ಹೊರಗಡೆ ಹೋಗಿದ್ದಾರೆ. ಇನ್ನೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾಹತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ನವಲಗುಂದ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದರು.
Laxmi News 24×7