Breaking News

ಜಮೀನಿಗೆ ನುಗ್ಗಿದ ಬಸ್: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Spread the love

ಧಾರವಾಡ:  ರಾಜ್ಯ  ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ  ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಮತ್ತು ಮೊರಬ ಗ್ರಾಮಗಳ ರಸ್ತೆಯ ಮಧ್ಯ ಸಂಭವಿಸಿದೆ.

ನವಲಗುಂದ ತಾಲೂಕಿನ ಹನಸಿ ಗ್ರಾಮದಿಂದ ಧಾರವಾಡದತ್ತ ಬರುತ್ತಿದ್ದ ಬಸ್  ಚಾಲಕನ ನಿಯಂತ್ರಣ ತಪ್ಪಿ, ಹೊಲದೊಳಗೆ ನುಗ್ಗಿದೆ. ಕೆಲವರು ಕಿಡಕಿಯಿಂದ ಜಿಗಿದು ಹೊರಗಡೆ ಹೋಗಿದ್ದಾರೆ. ಇನ್ನೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಳುಗಳನ್ನು ಆಸ್ಪತ್ರೆಗೆ  ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಅದೃಷ್ಟವಶಾಹತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ನವಲಗುಂದ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ