Breaking News

ಹು-ಧಾ ಅವಳಿನಗರದಲ್ಲಿ ಅಪರಿಚಿತ ವ್ಯಕ್ತಿಗಳ ಓಡಾಟ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಶಾಸಕ ಬೆಲ್ಲದ

Spread the love

ಧಾರವಾಡ : ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಪಾಕಿಸ್ತಾನ ಸೇರಿದಂತೆ ಬೇರೆ ದೇಶದ ಅನುಮಾನಾಸ್ಪದ ವ್ಯಕ್ತಿಗಳು ಕಾಲಿಟ್ಟಿದ್ದಾರಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಅಂತಹ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರಿಗೆ ಶಾಸಕ ಅರವಿಂದ ಬೆಲ್ಲದ ಪತ್ರ ಬರೆದಿದ್ದಾರೆ.

ನಿನ್ನೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಶಾಸಕ ಅರವಿಂದ ಬೆಲ್ಲದ ಅವರು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಪ್ರಾರ್ಥನಾ ಮಂದಿರಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು ಅಲ್ಲ ಎಂಬ ಶಂಕೆ ಮೂಡುತ್ತಿದೆ. ಹೀಗೆ ಓಡಾಡುತ್ತಿರುವವರಲ್ಲಿ ಹೊಸ ಮುಖ, ಅಪರಿಚಿತ, ಅನುಮಾನಾಸ್ಪದ ವ್ಯಕ್ತಿಗಳೇ ಹೆಚ್ಚಾಗಿದ್ದಾರೆ. ಅವರು ಹೊರ ದೇಶದ ಪ್ರಜೆಗಳಂತೆ ಭಾಸವಾಗುತ್ತಾರೆ ಎಂದಿದ್ದಾರೆ.

ಇವರು ಅವಳಿನಗರದ ವಿವಿಧ ಕೊಳಚೆ ಪ್ರದೇಶ ಸೇರಿದಂತೆ (ಜನ್ನತ್ ನಗರ ಧಾರವಾಡ ಸೇರಿದಂತೆ) ಹಲವೆಡೆ ವಾಸವಾಗಿದ್ದಾರೆಂಬ ಮಾಹಿತಿಯೂ ಇದೆ. ಅದಕ್ಕಾಗಿ ಈ ಕುರಿತು ಪೊಲೀಸ್ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ