Breaking News

ರಾಯಚೂರಲ್ಲಿ ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ,

Spread the love

ರಾಯಚೂರು: ನಗರದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲೇ ನೆತ್ತರು ಹರಿದಿದೆ. ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.

ನಗರದ ಡಾ.ಜಾಕೀರ್ ಹುಸೇನ್ ವೃತ್ತದಲ್ಲಿ ಯುವಕನ ಕೊಲೆ ನಡೆದಿದೆ. ಜಹೀರಾಬಾದ್‌ ಬಡಾವಣೆಯ ಸಾದಿಕ್ (27) ಹತ್ಯೆಯಾದ ಯುವಕ. ಘಟನೆ ಸಂಬಂಧ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಕರೀಂ ಬಂಧಿತ ಆರೋಪಿ. ಬೆಳಗ್ಗೆ ನಾಲ್ಕು ಗಂಟೆಗೆ ಇಡ್ಲಿ ತಿನ್ನಲು ಸಾದಿಕ್​ ಮನೆಯಿಂದ ಹೊರಗೆ ಬಂದಿದ್ದ. ಈ ವೇಳೆ ದಾಳಿ ಮಾಡಿ ಕೊಲೆಗೈಯ್ಯಲಾಗಿದೆ. ಆರೋಪಿಯು ಸಾದಿಕ್​ ದೇಹಕ್ಕೆ ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಾದಿಕ್​ನ​ನ್ನು​ ಆಸ್ಪತ್ರೆಗೆ ಸಾಗಿಸುತ್ತಿರುವಾಗ, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಹತ್ಯೆ ನಡೆದಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ