Breaking News

ಬೆಂಗಳೂರಿನ ವರುಣಾರ್ಭಟಕ್ಕೆ ಮೊದಲ ಬಲಿ

Spread the love

ಬೆಂಗಳೂರು, ಮೇ 19: ನಗರದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಸುರಿದ ಮಳೆ (rain) ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ತಡರಾತ್ರಿ ಕೂಡ ಮಳೆ ಆರ್ಭಟಿಸಿದ್ದು, ವರ್ಷದ ಮೊದಲ ಬಲಿ (death) ಪಡೆದುಕೊಂಡಿದೆ. ರಣ ರಕ್ಕಸ ಮಳೆಗೆ ಗೋಡೆ ಕುಸಿದು 35 ವರ್ಷದ ಮಹಿಳೆಯೋರ್ವರು ಪ್ರಾಣಬಿಟ್ಟಿದ್ದಾರೆ. ನಗರದ ವೈಟ್ ಫೀಲ್ಡ್​​ನ ಚನ್ನಸಂದ್ರದಲ್ಲಿ ದುರಂತ ಸಂಭವಿಸಿದೆ. ಖಾಸಗಿ ಕಂಪನಿಯ ಉದ್ಯೋಗಿ ಶಶಿಕಲಾ(35) ಮೃತ ಮಹಿಳೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ.

ವೈಟ್ ಫೀಲ್ಡ್​​ ಇಂಡರ್ಷಿಯಲ್ ಏರಿಯಾದ ಇಸ್ಮೋ ಮೈಕ್ರೋ ಸಿಸ್ಟ್ ಕಂಪನಿಯಲ್ಲಿ ಮೃತ ಶಶಿಕಲಾ ಕೆಲಸ ಮಾಡುತ್ತಿದ್ದರು. ಎಂದಿನಂತೆ ಇಂದು ಕೂಡ ಬೆಳಗ್ಗೆ 6.40 ನಿಮಿಷಕ್ಕೆ ಫಸ್ಟ್ ಶಿಫ್ಟ್​ಗೆ ಕೆಲಸಕ್ಕೆ ಬಂದಿದ್ದರು.  ಕೆಲಸಕ್ಕೆ ಹಾಜರಾಗಿ ಕೆಲವೇ ಹೊತ್ತಿನಲ್ಲೆ ಬೃಹತ್ ಗೋಡೆ ಕುಸಿದು ದುರಂತ ಸಂಭವಿಸಿದೆ.

ಐದು ಲಕ್ಷ ರೂ ಪರಿಹಾರ: ಪ್ರತಿಕ್ರಿಯೆ ನೀಡಿದ ಸಿಎಂ

ಇನ್ನು ಶಶಿಕಲಾ ಕೆಲಸ ಮಾಡಿಕೊಂಡಿದ್ದ ಕಂಪನಿಯಿಂದಲೇ ಪರಿಹಾರಕ್ಕೆ ಬಿಬಿಎಂಪಿ ಪಾಲಿಕೆ ಮುಖ್ಯ ಆಯುಕ್ತರಿಂದ ಸೂಚನೆ ಹಿನ್ನೆಲೆ ಮೃತ ಮಹಿಳೆಯ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ಧನ ಘೋಷಿಸಲಾಗಿದೆ. ಮಹಿಳೆ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಕೈ ಸನ್ನೆ ಮಾಡಿ ತೆರಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ