Breaking News

ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಅವಾಚ್ಯ ಪದ ಬಳಕೆ ಆರೋಪ: ಸಿ.ಟಿ ರವಿಗೆ ಬಿಗ್ ರಿಲೀಫ್

Spread the love

ನವದೆಹಲಿ, (ಮೇ 19): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ಗೆ​  (Lakshmi Hebbalkar) ಅವಾಚ್ಯ ಪದದಿಂದ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ (supreme court)​ ತಡೆಯಾಜ್ಞೆ ನೀಡಿದೆ. 

ಬೆಳಗಾವಿ ಅಧಿವೇಶನದ (Belagavi Session) ವೇಳೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್​ ಅವರು ದೂರು ನೀಡಿದ್ದರು. ಆದ್ರೆ, ಈ ದೂರು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ ಸಿಟಿ ರವಿಗೆ ಬಿಗ್ ರಿಲೀಫ್ ಸಿಕ್ಕಿದೆ.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್​​ ನಿರಾಕರಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಸಿಟಿ ರವಿ ಅವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಇಂದು(ಮೇ 19) ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ಸುಪ್ರೀಂಕೋರ್ಟ್​ ಪೀಠ, ಸಿ.ಟಿ. ರವಿ ವಿರುದ್ಧ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ