Breaking News

ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಸಹಕಾರ ಕ್ಷೇತ್ರ ಹಾಗೂ ರಾಜಕಾರಣದಲ್ಲಿ ಸಕ್ರಿಯನಾಗಿರುವೆ ಎಂದ ಸಚಿವ ಕೆ.ಎನ್‌.ರಾಜಣ್ಣ

Spread the love

ಮೈಸೂರು: ನನಗೆ 75 ವಯಸ್ಸಾಗಿದೆ. ಯುವಕರಿಗೆ ಅವಕಾಶ ಸಿಗಬೇಕು, ಆ ದೃಷ್ಟಿಯಿಂದ ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ, ಸಹಕಾರ ಕ್ಷೇತ್ರ ಹಾಗೂ ರಾಜಕಾರಣದಲ್ಲಿ ಸಕ್ರಿಯನಾಗಿರುವೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಪ್ರಕಟಿಸಿದರು.

ಹುಣಸೂರಿನಲ್ಲಿ‌ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರ ಮುಕ್ತಕ್ಕೆ ಕ್ರಮ ಕೈಗೊಳ್ಳಲಾಗುವುದು. ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಡತ ಕಳುಹಿಸಿದ್ದರೂ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಆದರೆ, ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಕೇಂದ್ರಕ್ಕೆ ಕಳುಹಿಸುವ ಅವಶ್ಯಕತೆ ಇಲ್ಲ. ಈ ಬಗ್ಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಎಂಡಿಸಿಸಿ ಸೇರಿದಂತೆ ಕೆಲ ಡೈರಿ ಚುನಾವಣೆಗಳನ್ನು ಮುಂದೂಡಲಾಗಿತ್ತು. ಅಲ್ಲದೇ ಮತಪಟ್ಟಿ ಸೇರಿದಂತೆ ಕೆಲ ತಾಂತ್ರಿಕ ಕಾರಣದಿಂದಾಗಿ ಚುನಾವಣೆ ಮುಂದೂಡಲಾಗಿದೆ. ಅದು ಬಿಟ್ಟು ಬೇರೆ ಕಾರಣವಿಲ್ಲ. ಸಹಕಾರಿ ಸಂಸ್ಥೆಗಳಲ್ಲಿ ವಹಿವಾಟು, ಮಹಾಸಭೆ ಸೇರಿದಂತೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೇ ವಿನಃ ಚುನಾವಣೆಯಲ್ಲಿ ಮತ ಹಾಕಲು ಸಹಕಾರ ಸಂಸ್ಥೆ ಸದಸ್ಯತ್ವ ಪಡೆಯುವುದಲ್ಲ. ಇದರಿಂದ ಆ ಸಂಘಗಳಿಗೆ ಹೊರೆಯಾಗಲಿದೆ. ಎಲ್ಲ ಸದಸ್ಯರು ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂಬುದು ಸರ್ಕಾರದ ಉದ್ದೇಶ. ಮುಂದೆ ಎಲ್ಲ ಚುನಾವಣೆಗಳನ್ನು ನಡೆಸಲಾಗುವುದು ಎಂದು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ