Breaking News

ಮಲೆಮಹದೇಶ್ವರ ಬೆಟ್ಟದ ಸಾಲೂರು ಮಠದ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

Spread the love

ಚಾಮರಾಜನಗರ: ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀ ಪಟ್ಟದ ಗುರುಸ್ವಾಮೀಜಿ ಮಂಗಳವಾರ ಮುಂಜಾನೆ ಲಿಂಗೈಕ್ಯರಾಗಿದ್ದಾರೆ.

ಶ್ರೀ ಗುರುಸ್ವಾಮೀಜಿ ಅವರು ಹನೂರು ತಾಲೂಕಿನ ಜಿ.ಕೆ ಹೊಸೂರು (ಗಂಗಾಧರನ ಕಟ್ಟೆ)ಗ್ರಾಮದ ರುದ್ರಪ್ಪ ಮತ್ತು ಪುಟ್ಟ ಮಾದಮ್ಮರ ಜೇಷ್ಠ ಪುತ್ರರಾಗಿ, 1956ರ ಆಗಸ್ಟ್ 2ರಂದು ಜನಿಸಿದ್ದರು. ನಂತರ ಸಾಲೂರು ಬ್ರಹನ್ ಮಠಕ್ಕೆ 17ನೇ ಪೀಠಾಧ್ಯಕ್ಷರಾಗಿ 1995ರ ಜನವರಿ 29 ರಂದು ಅಧಿಕಾರ ವಹಿಸಿಕೊಂಡಿದ್ದರು.

ಶ್ರೀ ಪಟ್ಟದ ಗುರುಸ್ವಾಮೀಜಿ ತಮ್ಮ 12ನೇ ವಯಸ್ಸಿನಲ್ಲಿ ಶ್ರೀಮಠಕ್ಕೆ ಬಂದು ಕಾಯ ವಾಚ, ಮಾನಸ ತ್ರಿಕರಣ ಶುದ್ದಿಯಿಂದ ಎಲೆಮರಿ ಕಾಯಿಯಂತೆ ದುಡಿದಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಶ್ರೀಮಠದಲ್ಲಿ ನಿತ್ಯ ದಾಸೋಹ ಸೇವೆ, ಶ್ರೀ ಮಹದೇಶ್ವರ ದೇವಸ್ಥಾನದ ಅಭಿವೃದ್ಧಿ, ಶ್ರೀ ಮಠದ ಅಭಿವೃದ್ಧಿ, ಅರ್ಚಕರ ಜೀವನ ಉದ್ದಾರ ಜೊತೆಗೆ ಶ್ರೀ ಸಾಲೂರು ಸ್ವಾಮಿ ಟ್ರಸ್ಟ್ ವತಿಯಿಂದ ಪೂನ್ನಾಚಿ ಗ್ರಾಮದಲ್ಲಿ ಗಿರಿಜನ ದಿನದಲಿತರ ಹಿಂದುಳಿದವರ ಉಳಿವಿಗಾಗಿ ಪ್ರೌಢಶಾಲೆ ಮತ್ತು ಉಚಿತ ಹಾಸ್ಟೆಲ್ ಸ್ಥಾಪನೆ, 1999 ರಲ್ಲಿ ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯದಲ್ಲಿ ಪ್ರೌಢಶಾಲೆ, ಹನೂರು ಹೊರವಲಯದಲ್ಲಿ ವೃದ್ಧರಿಗೆ ಆಶ್ರಯ ನೀಡಲು 10 ಎಕರೆ ಪ್ರದೇಶದಲ್ಲಿ ವೃದ್ಧಾಶ್ರಮವನ್ನು ಸ್ಥಾಪಿಸಿ ನೂರಾರು ನಿರಾಶ್ರಿತರಿಗೆ ಆಶ್ರಯ ನೀಡಿದ್ದಾರೆ. ಗ್ರಾಮೀಣ ಮಕ್ಕಳಿಗೆ ಅನುಕೂಲವಾಗಲು ಸಂಸ್ಕೃತ ಪಾಠ ಶಾಲೆಗಳನ್ನು ತೆರೆದಿದ್ದಾರೆ. ಹಬ್ಬ ಜಾತ್ರೆ ಸಂದರ್ಭದಲ್ಲಿ ಸಹಸ್ರಾರು ಮಂದಿ ಭಕ್ತರು ಇಲ್ಲಿ ದಾಸೋಹ ಸ್ವೀಕರಿಸಲು ಅನುವು ಮಾಡಿಕೊಟ್ಟಿದ್ದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ