ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಎರಡು ವರ್ಷಗಳ ಜನಪರ ಸಾಧನೆಯ ಸಮರ್ಪಣೆ. ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ
ಬಿಜೆಪಿ ಶ್ರೀಮಂತರ ಜೇಬು ತುಂಬುವ ಕೆಲಸ ಮಾಡುತ್ತಿದೆ…ಕಾಂಗ್ರೆಸ್ ಗ್ಯಾರಂಟಿಗಳ ಮೂಲಕ ಸಾಮಾನ್ಯ ಜನರ ಜೇಬು ತುಂಬುತ್ತಿದೆ; ಸಂಸದ ರಾಹುಲ್ ಗಾಂಧಿ
ಬಿಜೆಪಿ ಶ್ರೀಮಂತರ ಜೇಬು ತುಂಬುವ ಕೆಲಸ ಮಾಡುತ್ತಿದೆ…ಕಾಂಗ್ರೆಸ್ ಗ್ಯಾರಂಟಿಗಳ ಮೂಲಕ ಸಾಮಾನ್ಯ ಜನರ ಜೇಬು ತುಂಬುವ ಕೆಲಸ ಮಾಡುತ್ತಿದೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಶ್ವಪರಂಪರೆ ವಿಜಯನಗರದ ಹೆಬ್ಬಾಗಿಲು ಎನಿಸಿಕೊಂಡಿರುವ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶ ನಡೆಯಿತು.
ಈ ವೇಳೆ ಮಾತನಾಡಿದ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ, ಯೋಜನೆಗಳ ಮೂಲಕ ನೀಡಿದ ಹಣವನ್ನು ರಾಜ್ಯದ ಜನರು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಜನರ ಜನ ಜನರಿಗೆ ಸೇರಬೇಕೆಂಬುದೇ ನಮ್ಮ ಉದ್ಧೇಶವಾಗಿತ್ತು. ಬಿಜೆಪಿ ದೇಶದ ಶ್ರೀಮಂತರಿಗೆ ಮಾತ್ರ ಹಣ ಸಿಗಲಿ ಎಂಬ ಭಾವನೆಯನ್ನು ಹೊಂದಿದೆ. ಆದರೇ ಈ ದೇಶದ ಬಡ, ದಲಿತ, ಬುಡಕಟ್ಟು, ಹಿಂದುಳಿದ ಜನರ ಜೇಬಿಗೆ ಹೋಗಲಿ ಎಂಬುದು ಕಾಂಗ್ರೆಸನ ಉದ್ಧೇಶವಾಗಿದೆ. ಇದು ಕರ್ನಾಟಕದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸುತ್ತಿದೆ ಎಂದರು.
ಸಿಎಂ ಸಿದ್ಧರಾಮಯ್ಯನವರು ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾನು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಆದರೆ, ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಲಿಲ್ಲ ಎಂದು ಪ್ರಶ್ನಿಸಿದರು. ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಸುರಳಿತವಾಗಿ ನಡೆದಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೊಳಿಸಿ ನುಡಿದಂತೆ ನಡೆಯುತ್ತಿದೆ. ಆದರೇ, ಪಿಎಂ ಮೋದಿ ನೀಡಿದ ಮಾತುಗಳನ್ನು ತಪ್ಪಿದ್ದಾರೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರು ಭಾರತ ಜೋಡೋ ಮೂಲಕ ದೇಶವನ್ನ ಒಂದಾಗಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಆಯ್ಕೆಯಾಗುವಂತೆ ಮಾಡಿದರು. ವಿರೋಧ ಪಕ್ಷಗಳು ಹಲವಾರು ಟೀಕೆಗಳನ್ನು ಮಾಡುತ್ತಾರೆ. ಟೀಕೆಗಳು ಸಾಯುತ್ತವೆ ಆದರೇ, ನಮ್ಮ ಕೆಲಸಗಳು ಉಳಿಯುತ್ತವೆ. ಇದಕ್ಕೆಲ್ಲ ನಮ್ಮ ಯೋಜನೆಗಳೇ ಸಾಕ್ಷಿ ಎಂದರು.
ಇನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಎಲ್ಲ ಇಲಾಖೆಗಳು ಕರ್ನಾಟಕ ಸರ್ಕಾರದಲ್ಲಿ ಹಲವಾರು ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಜಾರಿ ಮಾಡುತ್ತಿದೆ. ಸರ್ಕಾರದ ಬಳಿ ಹಣವಿಲ್ಲವೆಂದು ಬಿಜೆಪಿಗರು ಆರೋಪಿಸುತ್ತಿದ್ದಾರೆ. ಆದರೇ, 10 ಸಾವಿರ ಕೋಟಿ ರೂಪಾಯಿಯಲ್ಲಿ ಕಳೆದ ಬಾರಿ ಕೆಲಸ ಮಾಡಿದ್ದೇವೆ. ಮುಂದೆಯೂ 10 ಸಾವಿರ ಕೋಟಿ ರೂಪಾಯಿಯಲ್ಲಿ ಕೆಲಸ ಮಾಡುತ್ತೇವೆ. ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅತ್ಯಂತ ಯಶಸ್ವಿಯಾಗಿ ಕೆಲಸ ಮಾಡುತ್ತಿದೆ. ಮುಂಬರುವ 3 ವರ್ಷದಲ್ಲಿ ಜನರ ನಿರೀಕ್ಷೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. 2028 ರಲ್ಲಿಯೂ ನಿಮ್ಮ ಆರ್ಶೀವಾದ ನಮ್ಮ ಮೇಲಿರಲಿ ಎಂದರು.
ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾಗವಹಿಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು. ಸಮಾವೇಶದಲ್ಲಿ 1,11,111 ಭೂ ರಹಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಜೊತೆಗೆ ಕಂದಾಯ ಇಲಾಖೆಯ ಮಹತ್ವದ ಯೋಜನೆಗಳನ್ನು ಸಮಾವೇಶದ ಮೂಲಕ ಸಾಕಾರಗೊಳಿಸಲಾಯಿತು.
ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಎಚ್.ಕೆ.ಪಾಟೀಲ್, ಚಲುವರಾಯಸ್ವಾಮಿ, ಡಾ.ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್, ಜಮೀರ್ ಅಹಮದ್‌ಖಾನ್, ಈಶ್ವರ್‌ಖಂಡ್ರೆ, ಲಕ್ಷ್ಮೀಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಕೃಷ್ಣಭೈರೇಗೌಡ, ದಿನೇಶ್‌ಗುಂಡೂರಾವ್, ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.