Breaking News

ವಧುವಿನ ಕೊಠಡಿಗೆ ನುಗ್ಗಿ 3.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು!:ವಾರಸುದಾರರಿಗೆ ಚಿನ್ನಾಭರಣವನ್ನು ವಾಪಸ್ ನೀಡಿದ ಪೊಲೀಸರು

Spread the love

ನೆಲಮಂಗಲ: ಮದುವೆ ಕಾರ್ಯದಲ್ಲಿ ಎಲ್ಲರೂ ಬ್ಯೂಸಿ ಇದ್ದ ಸಮಯದಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿದ ಕಳ್ಳನೊಬ್ಬ, ನಕಲಿ ಕೀ ಬಳಿಸಿ ವಧುವಿನ ಕೊಠಡಿ ಪ್ರವೇಶಿಸಿದ್ದಲ್ಲದೇ ಸೂಟ್ ಕೇಸ್​ನಲ್ಲಿ ಇಡಲಾಗಿದ್ದ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ. ಅರೋಪಿಯನ್ನು ಬಂಧಿಸಿರುವ ನೆಲಮಂಗಲ ಟೌನ್ ಪೊಲೀಸರು, ಚಿನ್ನಾಭರಣವನ್ನ ವಾರಸುದಾರರಿಗೆ ವಾಪಸ್ ನೀಡಿದ್ದಾರೆ.

ಬಂಧಿತ ಆರೋಪಿ ದಾವಣಗೆರೆ ಮೂಲದ ಕಿರಣ್ ಅಲಿಯಾಸ್ ಚೌಲ್ಟ್ರಿ ಕಿರಣ್ (25) ಎಂದು ಗುರುತಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಮೇ 14 ಮತ್ತು 15 ರಂದು ನಗರದ ಎಂವಿಎಂ ಕಲ್ಯಾಣ ಮಂಟಪದಲ್ಲಿ ಉದ್ಯಮಿ ವೆಂಕಟೇಶ್ ಅವರ ಮಗಳ ಮದುವೆ ಕಾರ್ಯ ನಡೆದಿತ್ತು. ಮದುವೆ ಸಮಾರಂಭದಲ್ಲಿ ತಮ್ಮನ ಮಗಳು ನಯನಾ ಬಂದಿದ್ದರು. ಮೇ 15ರ ಬೆಳಗ್ಗೆ 11 ಗಂಟೆ ಸಮಯದಲ್ಲಿ ನಯನಾ ಕಲ್ಯಾಣ ಮಂಟಪದಲ್ಲಿನ ಹೆಣ್ಣಿನ ಕೊಠಡಿಯಲ್ಲಿನ ಸೂಟ್ ಕೇಸ್​ನಲ್ಲಿ ಸಮಾರು 3.5 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನದ ಚೈನ್ ಇಟ್ಟು ಮದುವೆ ಕಾರ್ಯದಲ್ಲಿ ಬ್ಯೂಸಿಯಾಗಿದ್ದರು. ಮದುವೆ ಮುಗಿದ ನಂತರ ಮನೆಗೆ ಬಂದು ಸೂಟ್ ಕೇಸ್ ಪರಿಶೀಲನೆ ಮಾಡಿದಾಗ ಚಿನ್ನದ ಚೈನ್ ಕಳವಾಗಿರುವುದು ಬೆಳಕಿಗೆ ಬಂದಿತ್ತು. ವೆಂಕಟೇಶ್‌ ಅವರು ಮೇ 15ರಂದು ಈ ಬಗ್ಗೆ ನೆಲಮಂಗಲ ಟೌನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ