Home / ಜಿಲ್ಲೆ / ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿ

ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿ

Spread the love

ಬೆಳಗಾವಿ – ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಕಳೆದ ಶನಿವಾರ ಅವರಿಗೆ ಸ್ವಲ್ಪಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡಾಗ ಗಂಟಲು ದ್ರವ ತಪಾಸಣೆಗೆ ಕಳುಹಿಸಿದರು. ಅಂದಿನಿಂದಲೇ ಅವರು ಮನೆಯ ಒಂದು ಕೊಠಡಿಯಲ್ಲೇ ವಾಸ್ತವ್ಯ ಮಾಡಿದರು. ಸೋಮವಾರ ಅವರ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಕೊರೋನಾ ಲಕ್ಷಣಗಳು ಕಾಣಿಸಿವೆ. ಹಾಗಾಗಿ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ಒಂದು ವಾರ ಕ್ವಾರಂಟೈನ್ ನಲ್ಲಿರುವುದಾಗಿ ಬೆನಕೆ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.

ಇಂದು ಅವರ ಮನೆಯ ಇತರ ಸದಸ್ಯರ ಗಂಟಲು ದ್ರವಗಳನ್ನು ಸಹ ಪರೀಕ್ಷೆಗೆ ಕಳುಹಿಸಲಾಗುತ್ತಿದೆ.

 

ನನಗೆ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ನಾನು ಶನಿವಾರದಿಂದಲೇ ಹೋಂ ಕ್ವಾರಂಟೈನ್ ಗೆ ಒಳಗಾದೆ. ಇದೀಗ ಪರೀಕ್ಷಾ ವರದಿ ಬಂದಿದ್ದು, ಸ್ವಲ್ಪಮಟ್ಟಿಗೆ ಲಕ್ಷಣ ಕಾಣಿಸಿದೆ. ಹಾಗಾಗಿ ಇನ್ನೂ ಕೆಲವು ದಿನ ಕ್ವಾರಂಟೈನ್ ಮುಂದುವರಿಸುತ್ತೇನೆ

ಅನಿಲ ಬೆನಕೆ, ಶಾಸಕ

 


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ