Breaking News

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ

Spread the love

ಬೆಂಗಳೂರು, ಮೇ 21: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್​ ಅಧಿಕಾರಿ ಹಾಗೂ ಕನ್ನಡಿಗ ಡಾ. ಎಂ ಎ ಸಲೀಂ (MA Salim) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ ಎ ಸಲೀಂ ಅವರು ಬುಧವಾರವೇ (ಮೇ.21) ಅಧಿಕಾರಿ ವಹಿಸಿಕೊಂಡಿದ್ದಾರೆ.

ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್​ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಐಪಿಎಸ್​ ಅಧಿಕಾರಿ, ಕರ್ನಾಟಕದ ಪೊಲೀಸ್​ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್​ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಿದ್ದಾರೆ.ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದಾರೆ.

ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್​ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ