Breaking News

ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ

Spread the love

ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.

ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, 60 ಲಕ್ಷ ಟನ್ ಸಕ್ಕರೆಯನ್ನು ರೈತರಿಂದ ಖರೀದಿಸಿ ವಿದೇಶಗಳಿಗೆ ರಫ್ತು ಮಾಡಲು ನಿರ್ಧರಿಸಲಾಗಿದೆ. ಹೀಗೆ ಬಂದ ಹಣವನ್ನು ರೈತರ ಖಾತೆಗೆ ಜಮಾವಣೆ ಮಾಡಲು ಕೇಂದ್ರ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

3,500 ಕೋಟಿ ಸಬ್ಸಿಡಿಯಿಂದ ದೇಶದ 5 ಕೋಟಿ ಕಬ್ಬು ಬೆಳೆಗಾರರಿಗೆ ಹಾಗೂ 5 ಲಕ್ಷ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ