Breaking News

ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪೊಲೀಸ್ ವಶಕ್ಕೆ

Spread the love

ಬೆಂಗಳೂರು : ಸಹನಟಿ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಈ ಸಂಬಂಧ ಕಾಮಿಡಿ ಕಿಲಾಡಿ ರಿಯಾಲಿಟಿ ಶೋ ಖ್ಯಾತಿಯ ಮಡೆನೂರು ಮನು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

33 ವರ್ಷದ ಸಹ ನಟಿ ನೀಡಿದ ದೂರಿನ ಮೇರೆಗೆ ಹಾಸನದ ಶಾಂತಿಗ್ರಾಮದಲ್ಲಿ ಆರೋಪಿ ಮನು ಅವರನ್ನು ವಶಕ್ಕೆ ಪಡೆದು ಕರೆತರಲಾಗುತ್ತಿದೆ. ವಿಚಾರಣೆ ಮುಕ್ತಾಯದ ಬಳಿಕ ಕಾನೂನು ಪ್ರಕ್ರಿಯೆಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸ್ಯ ನಟನಾಗಿ ಖ್ಯಾತಿ ಪಡೆದಿದ್ದ ಮನು ಕುಲದಲ್ಲಿ ಕೀಳ್ಯಾವುದೋ ಎಂಬ ಚಿತ್ರದಲ್ಲಿ ನಾಯಕನಾಗಿ ಬಡ್ತಿ ಪಡೆದಿದ್ದು, ಈ ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ದಾಖಲಾಗಿರುವುದು ಚಿತ್ರತಂಡಕ್ಕೆ ಆಘಾತವಾಗಿದೆ.

ದೂರಿನಲ್ಲಿ ಏನಿದೆ ? 2018ರಲ್ಲಿ ಪರಿಚಯವಾಗಿದ್ದ ಮನು ನಾಗರಬಾವಿಯಲ್ಲಿ ಬಾಡಿಗೆ ಮನೆ ಮಾಡಿಕೊಟ್ಟಿದ್ದರು. ಕಾರ್ಯಕ್ರಮದ ಸಲುವಾಗಿ 2022ರಲ್ಲಿ ಕಾಮಿಡಿ ಕಿಲಾಡಿ ಶೋ ಕಲಾವಿದರೊಂದಿಗೆ ನನ್ನನ್ನ ಶಿವಮೊಗ್ಗದ ಶಿಕಾರಿಪುರಕ್ಕೆ ಕರೆದೊಯ್ದಿದ್ದರು. ಕಾರ್ಯಕ್ರಮ ಮುಗಿದ ಬಳಿಕ ರೂಮ್​ನಲ್ಲಿ ಉಳಿದುಕೊಂಡಿದ್ದೆ. ಸಂಭಾವನೆ ನೀಡುವ ನೆಪದಲ್ಲಿ ನನ್ನ ರೂಮಿಗೆ ಬಂದ ಮನು ತನ್ನ ಮೇಲೆ ಆತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಳೆ.

ಇದಾದ ಕೆಲ ದಿನಗಳ ಬಳಿಕ ನನ್ನ ಮನೆಗೆ ಬಂದು ವಿರೋಧದ ನಡುವೆಯೂ ತಾಳಿ ಕಟ್ಟಿದ್ದು, ನಂತರ ಇದೇ ಮನೆಯಲ್ಲಿ ಹಲವು ಬಾರಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಗರ್ಭಿಣಿಯಾಗಿರುವುದನ್ನು ಅರಿತು ಗರ್ಭ ನಿರೋಧಕ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದಾನೆ. ಅಲ್ಲದೆ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದು, ಈ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ:ಬಾಲಚಂದ್ರ ಜಾರಕಿಹೊಳಿ

Spread the love ಅರಭಾವಿ – ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಉಂಟಾಗುತ್ತಿದ್ದು, ಅರಭಾವಿ ಪಟ್ಟಣದ ಅಭಿವೃದ್ಧಿಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ