Breaking News

ಇಂದು ಸಿಇಟಿ ಫಲಿತಾಂಶ ಪ್ರಕಟ; ಈ ಲಿಂಕ್​ಗಳ ಮೂಲಕ ಮಧ್ಯಾಹ್ನ 2 ಗಂಟೆ ಬಳಿಕ ರಿಸಲ್ಟ್ ನೋಡಿ

Spread the love

ಬೆಂಗಳೂರು: ಇಂಜನೀಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಳೆದ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು (ಮೇ 24ರಂದು) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಇಂದು ಬೆಳಗ್ಗೆ 11.30ಕ್ಕೆ ಫಲಿತಾಂಶದ ವಿವರಗಳನ್ನು ಬಹಿರಂಗಗೊಳಿಸಲಿದ್ದಾರೆ.

ಕೆಇಎ ಕಚೇರಿಯಲ್ಲಿ ಬೆಳಗ್ಗೆ ಕರೆಯಲಾದ ಮಾಧ್ಯಮ ಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರು ಸಿಇಟಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳ ವಿವರಗಳು ಮತ್ತು ಪರೀಕ್ಷೆಯಲ್ಲಿ ತೇರ್ಗಡೆಯಾದ ಶೇಕಡಾವಾರು ಮಾಹಿತಿಗಳನ್ನು ನೀಡಲಿದ್ದಾರೆ.

ಪರೀಕ್ಷೆ ಫಲಿತಾಂಶವನ್ನು ಅಭ್ಯರ್ಥಿಗಳು ಮಧ್ಯಾಹ್ನ 2 ಗಂಟೆಯ ಬಳಿಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್ ಸೇರಿದಂತೆ

  • (1) https://t.co/TLplrLc0qv
  • (2) https://t.co/7q9hak7Y9z
  • (3) https://x.com/CMofKarnataka
  • (4) https://x.com/drmcsudhakar
  • (5) https://x.com/KEA_karnataka ಈ ಲಿಂಕ್​ಗಳಲ್ಲಿ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ತಿಂಗಳ ಏಪ್ರಿಲ್ 16 ಮತ್ತು 17 ರಂದು ಸಿಇಟಿ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಘೋಷಣೆ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸುವ ನಿರ್ಧಾರವನ್ನು ಕೆಇಎ ಮಾಡಿದ್ದು, ಅದರಂತೆ ಶನಿವಾರ ಸಿಇಟಿ ರಿಸಲ್ಟ್ ಅನ್ನು ಪ್ರಕಟಿಸುತ್ತಿದೆ.

ಸಿಇಟಿ ಪರೀಕ್ಷೆಯನ್ನು ಒಟ್ಟು 3 ಲಕ್ಷದ 11 ಸಾವಿರ ಬರೆದಿದ್ದರು. ಶೇಕಡಾ 94.20ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ