ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ
ಖಾನಾಪೂರದ ಪಟ್ಟಣ ಪಂಚಾಯಿತಿ ಮಾಜಿ ಉಪ ನಗರಾಧ್ಯಕ್ಷೆ ಹಾಲಿ ಸದಸ್ಯೆ ಮೇಘಾ ಕುಂದರಗಿ ಅವರು ಶಾಸಕ ವಿಠ್ಠಲ ಹಲಗೇಕರ ಮತ್ತು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಮಾಲಾರ್ಪಣೆ ಮಾಡಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಖಾನಾಪೂರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಮೇಘಾ ಕುಂದರಗಿ ಅವರು ತಮ್ಮ ನಿವಾಸದಲ್ಲಿ ಸತ್ಕರಿ ಖಾನಾಪೂರ ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಮನವಿ ಮಾಡಿದರು
ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಶಿವಾನಂದ ಕುಂದರಗಿ, ಪ್ರಮೋದ್ ಕಚೋರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಸಂಸದರು ಖಾನಾಪೂರ ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಮುಂಬರುವ ದಿನಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದರು.
Laxmi News 24×7