Breaking News

ಶಾಲೆ ಪುನಾರಂಭದಲ್ಲೇಕೊರೊನಾ ಕಂಟಕ: ಆರೋಗ್ಯ ಇಲಾಖೆ ಅಲರ್ಟ್

Spread the love

ಬೆಂಗಳೂರು, ಮೇ 25: ರಾಜ್ಯದಲ್ಲಿ ಕೊರೊನಾ (Karnataka Covid) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ (Coronavirus) ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

ಮುಂದಿನ ವಾರ ಮೇ.29ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನಾರಂಭವಾಗುತ್ತವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಅಂತ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳಿಗೆ ಮಾಸ್ಕ್ ಧರಿಸಿ ಶಾಲೆಗೆ ಕಳುಹಿಸುವಂತೆ ಪೋಷಕರಿಗೆ ಶಾಲೆಗಳ ಆಡಳಿತ ಮಂಡಳಿ ಸೂಚನೆ ನೀಡುತ್ತಿವೆ. ಶಾಲಾ-ಕಾಲೇಜು ಸಿಬ್ಬಂದಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ.

ಯಾವುದೇ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕಬೇಡಿ: ಸಿಎಂ

ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವರಿಗೆ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸಿರುವ ಸಿಎಂ ಸಿದ್ದರಾಮಯ್ಯ, ಯಾವುದೇ ಕ್ರಮ ತೆಗೆದುಕೊಳ್ಳುವುದಕ್ಕೂ ಹಿಂದೇಟು ಹಾಕಬೇಡಿ. ಏನೇ ಕ್ರಮ ತೆಗೆದುಕೊಳ್ಳಬೇಕೆಂದರೂ ತಜ್ಞರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

2 ದಿನದಲ್ಲಿ ಟೆಸ್ಟ್ ಕಿಟ್ ಆಸ್ಪತ್ರೆಗಳಿಗೆ ತಲುಪುತ್ತವೆ: ಗುಂಡೂರಾವ್​

ಇಂದಿನಿಂದಲೇ ಕೊರೊನಾ ಟೆಸ್ಟ್ ಶುರುವಾಗುತ್ತೆ ಅಂತ ಹೇಳಲಾಗಿತ್ತು. ಆದರೆ, ಬೆಂಗಳೂರಿನ ಆಸ್ಪತ್ರಗೆಳಲ್ಲಿ ಟೆಸ್ಟ್ ಕಿಟ್‌ ಕೊರತೆ ಇದೆ. ಬಿಬಿಎಂಪಿ, ಸರ್ಕಾರಿ ಆಸ್ಪತ್ರಗೆಳಲ್ಲಿ ಟೆಸ್ಟ್ ಕಿಟ್‌ಗಳಿಲ್ಲ. ಕಿಟ್ ಬಂದ ಬಳಿಕ ಪರೀಕ್ಷೆ ಆರಂಭಿಸುತ್ತೇವೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.

ಈ ಬಗ್ಗೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಪ್ರತಿಕ್ರಿಯಿಸಿದ್ದು, ನಾಳೆ, ನಾಡಿದ್ದು ಆಸ್ಪತ್ರೆಗಳಿಗೆ ಕೊರೊನಾ ಟೆಸ್ಟಿಂಗ್ ಕಿಟ್​ಗಳು ತಲುಪಲಿವೆ. ವಿಶೇಷವಾಗಿ ತೀವ್ರ ಉಸಿರಾಟ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ವಯೋವೃದ್ಧರಿಗೆ ಮತ್ತು ಮಕ್ಕಳಲ್ಲಿ ಮೈಕೈ ನೋವು, ನೆಗಡಿ, ಜ್ವರದಂತಹ ಲಕ್ಷಣಗಳು ಕಂಡುಬಂದರೇ ಕೊರೊನಾ ಟೆಸ್ಟ್ ಮಾಡಿಸಿ ಎಂದು ಹೇಳಿದರು.

ಪರಿಸ್ಥಿತಿ ಅವಲೋಕಿಸಿ ಮುಂದಿನ 4-5 ದಿನಗಳ ನಂತರ ಹೇಳುತ್ತೇವೆ. ವಾರಕ್ಕೆ ಒಮ್ಮೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸುತ್ತೇವೆ. ಕೊರೊನಾ ಬಗ್ಗೆ ನಾವು ಯಾವುದೇ ನಿರ್ಲಕ್ಷ್ಯ ಮಾಡುತ್ತಿಲ್ಲ. ವಸ್ತು ಸ್ಥಿತಿ ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ