Breaking News

ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಯುವಕ-ಯುವತಿಯರನ್ನು ವಶಕ್ಕೆ ಪಡೆದ ಪೊಲೀಸರು

Spread the love

ದೇವನಹಳ್ಳಿ(ಬೆಂಗಳೂರು ಗ್ರಾ.): ಇಲ್ಲಿನ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಇಂದು ಬೆಳಗ್ಗೆ ದಾಳಿ ಮಾಡಿದ್ದಾರೆ. ಈ ವೇಳೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕ, ಯುವತಿಯರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ವಲಯ ಡಿಸಿಪಿ ವಿ.ಜೆ.ಸಜೀತ್ ಅವರು ಪ್ರತಿಕ್ರಿಯೆ ನೀಡಿದ್ದು, “NDPS ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ದೇವನಹಳ್ಳಿಯ ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ಮುಂಜಾನೆ 5 ಗಂಟೆ ಸಮಯದಲ್ಲಿ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬರ ಬರ್ತ್ ಡೇ ಸೆಲೆಬ್ರೇಷನ್​ಗಾಗಿ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ಇಡೀ ರಾತ್ರಿ ಮಾದಕ ವಸ್ತುಗಳನ್ನು ಬಳಕೆ ಮಾಡಿರುವುದು ಕಂಡುಬಂದಿದೆ. 24 ಯುವಕರು 7 ಯುವತಿಯರು ಸೇರಿದಂತೆ ಒಟ್ಟು 31 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ” ಎಂದು ತಿಳಿಸಿದರು.”ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್ ಸೇರಿದಂತೆ ಡ್ರಗ್ ಸೇವನೆ ಮಾಡುವವರು ಭಾಗವಹಿಸಿದ್ದರು. 31 ಜನರ ರಕ್ತ ಮತ್ತು ಮೂತ್ರದ ಸ್ಯಾಂಪಲ್ ಸಂಗ್ರಹಿಸಿ ಎಫ್​ಎಸ್​ಎಲ್ ವರದಿಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಪಾರ್ಟಿಯಲ್ಲಿ ಭಾಗವಹಿಸಿದ ಕೆಲವರಲ್ಲಿ ಅಲ್ಪ ಪ್ರಮಾಣದ ಕೊಕೇನ್ ಸೇರಿದಂತೆ ಮಾದಕ ವಸ್ತುಗಳು ಸಿಕ್ಕಿದ್ದು, ಜಪ್ತಿ ಮಾಡಲಾಗಿದೆ” ಎಂದರು


Spread the love

About Laxminews 24x7

Check Also

ಪಾಲಿಕೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್: ಮಂಗಳವಾರ ಸಚಿವರೊಂದಿಗೆ ಸಭೆ

Spread the love ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮೂಹಿಕ ರಜೆ ಪಡೆಯುವ ಮೂಲಕ ಬಿಬಿಎಂಪಿ ಸೇರಿದಂತೆ ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ