ಬೆಂಗಳೂರು: ಅತ್ಯಾಚಾರ ಆರೋಪದಡಿ ಬಂಧಿಸಲ್ಪಟ್ಟಿರುವ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಖ್ಯಾತಿಯ ನಟ ಮಡೆನೂರು ಮನುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 3ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಈ ಹಿಂದೆ ಖಾಸಗಿ ವಾಹಿನಿಯ ರಿಯಾಲಿಟಿ ಶೋವೊಂದರಲ್ಲಿ ಮನು ಭಾಗಿಯಾಗಿದ್ದರು. ಅದೇ ಶೋನಲ್ಲಿ ಭಾಗಿಯಾಗಿದ್ದ ಸಹ ಸ್ಪರ್ಧಿಯೊಬ್ಬರು ನೀಡಿದ್ದ ದೂರಿನನ್ವಯ ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಕಾಮಿಡಿ ಕಾರ್ಯಕ್ರಮವೊಂದಕ್ಕೆ 2022ರಲ್ಲಿ ಶಿಕಾರಿಪುರಕ್ಕೆ ತೆರಳಿದ್ದಾಗ, ತನ್ನ ಮೇಲೆ ಮನು ಅತ್ಯಾಚಾರವೆಸಗಿದ್ದ. ಆ ನಂತರವೂ ನಿರಂತರವಾಗಿ ಅತ್ಯಾಚಾರವೆಸಗಿದ್ದು, ಗರ್ಭಪಾತ ಮಾಡಿಸಿದ್ದಾನೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ಆರೋಪಿಸಿದ್ದರು. ಮೇ 22ರಂದು ಮನು ಅವರನ್ನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ ಕಸ್ಟಡಿಗೆ ಪಡೆದುಕೊಂಡಿದ್ದರು.
Laxmi News 24×7