ಬೆಂಗಳೂರು, (ಮೇ 26): ಕರ್ನಾಟಕದಲ್ಲಿ ಕೊವಿಡ್ (Covid) ನಿಯಂತ್ರಣ ಸಂಬಂಧ ಇಂದು (ಮೇ 26) ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ನೇತೃತ್ವದಲ್ಲಿ ನಡೆ ಸಭೆ ಅಂತ್ಯವಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಿ.
ಕಳೆದ ಬಾರಿ ಆದಂತೆ ಸಮಸ್ಯೆ ಆಗಬಾರದು. ಕೊವಿಡ್ ಸಹಾಯವಾಣಿ ತೆರೆಯಿರಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಅಲ್ಲದೇ ಜ್ವರ, ನೆಗಡಿ ಇರುವ ಮಕ್ಕಳಿಗೆ ಶಾಲೆಗಳು ರಜೆ ನೀಡುವಂತೆ ಸೂಚಿಸಿದ್ದಾರೆ. ಪ್ರತಿ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.ಸಭೆ ಬಳಿಕ ಸದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೇಂದ್ರದ ಅಭಿಪ್ರಾಯ ಪಡೆದು ವ್ಯಾಕ್ಸಿನ್ ನೀಡಲಾಗುತ್ತದೆ.
ಕೊವಿಡ್ ಲಕ್ಷಣ ಇರುವ ಮಕ್ಕಳಿಗೆ ರಜೆ ನೀಡಲು ಸೂಚನೆ ನೀಡಲಾಗಿದೆ. ಶಾಲೆಯ ಆಡಳಿತ ಮಂಡಳಿ ಕೂಡ ಗಮನ ಹರಿಸಬೇಕು. ಟೆಸ್ಟಿಂಗ್ ವಿಚಾರದಲ್ಲಿ ಹಳೆಯೆ ಪದ್ಧತಿ ಅನುಸರಿಸುತ್ತೇವೆ. ಅಗತ್ಯವಿರುವ ಎಲ್ಲ ಕ್ರಮಗಳನ್ನ ನಾವು ತೆಗೆದುಕೊಳ್ಳುತ್ತೇವೆ. ವ್ಯಾಕ್ಸಿನ್ ಕೊಡುವ ಬಗ್ಗೆ ಸಿಎಂ ವರದಿ ನೀಡಿ ಎಂದಿದ್ದು, ಕೇಂದ್ರದ ಅಭಿಪ್ರಾಯ ಪಡೆದು ವರದಿ ನೀಡಲು ಹೇಳಿದ್ದಾರೆ.ಅಲ್ಲದೇ ವೈದ್ಯರು, ಸಿಬ್ಬಂದಿಗೂ ರಜೆ ಮೇಲೆ ಹೋಗದಂತೆ ಸೂಚಿಸಲಾಗಿದೆ ಎಂದು ಹೇಳಿದರು.