ಬೆಂಗಳೂರು : ಕರ್ನಾಟಕ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯನ್ನಾಗಿ ಪದೋನ್ನತಿ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಬಿ.ವಿ. ನಾಗರತ್ನ, ವಿಕ್ರಮ್ ನಾಥ್ ಮತ್ತು ಜೆ.ಕೆ. ಮಹೇಶ್ವರಿ ಅವರನ್ನೊಳಗೊಂಡ ಕೊಲಿಜಿಯಂ ಮೇ 26ರಂದು ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದರು.
ಇದೇ ವೇಳೆ ಗೌಹಟಿ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ವಿಜಯ್ ಬಿಶ್ಣೋಯಿ ಮತ್ತು ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಅವರನ್ನು ಸುಪ್ರೀಂಕೋರ್ಟ್ ನ್ಯಾಯಾಮೂರ್ತಿಗಳನ್ನಾಗಿ ಪದೋನ್ನತಿ ನೀಡಲು ಶಿಫಾರಸು ಮಾಡಿ ಆದೇಶಿಸಿದೆ.