Breaking News

ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್​​​ಗೆ ಡಿಕ್ಕಿ, ಬೈಕ್​ನಲ್ಲಿದ್ದ ಇಬ್ಬರು ಸಾವು

Spread the love

ಬಳ್ಳಾರಿ: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್​​​ಗೆ ಬೈಕ್​ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್​ನಲ್ಲಿದ್ದ ಗುಗ್ಗರಹಟ್ಟಿಯ ಅಬ್ದುಲ್‌ ಅರ್ಮಾನ್‌ (21) ಮತ್ತು ಸೋದರನ ಪುತ್ರಿ ಹಸೀನಾ ನಯಾಜ್‌ (5) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರು – ಲಾರಿ ನಡುವೆ ಭೀಕರ ರಸ್ತೆ ಅಪಘಾತ, ನಾಲ್ವರು ಸಾವು: ಕಾರು ಮತ್ತು ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗಪೂರ ಗ್ರಾಮದ ಬಳಿ ನಡೆದಿತ್ತು. ಇಬ್ಬರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಒಬ್ಬ ತೀವ್ರವಾಗಿ ಗಾಯಗೊಂಡಿದ್ದ.

ಲಕ್ಷ್ಮೀ ಪುರದಿಂದ ಆಸ್ಪತ್ರೆಗೆ ಎಂದು ಹೊಸಪೇಟೆಗೆ ನಂದೀಶ್ ಮತ್ತವರ ಕುಟುಂಬ ಹೊರಟಿತ್ತು. ಬೆಳಗ್ಗೆ 10 ಗಂಟೆ ಸುಮಾರಿಗೆ ಹೊಸಪೇಟೆ ಕಡೆಯಿಂದ ಬಂದ ಮೈನ್ಸ್ ಸಾಗಣೆಯ ಟಿಪ್ಪರ್ ಲಾರಿ ಚಾಲಕನ‌ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಜಯಲಕ್ಷ್ಮಿ(21), ಆಶಾ (28), ಮಕ್ಕಳಾದ ಸ್ವಾತಿ (05) ಮತ್ತು ಬಿಂದುಶ್ರೀ (04) ಕಾರಿನಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರು ಚಲಾಯಿಸುತ್ತಿದ್ದ ನಂದೀಶ್ (29) ಮತ್ತು ಮಹಾಲಕ್ಷ್ಮಿ (03), ರಮೇಶ್ ತೀವ್ರವಾಗಿ ಗಾಯಗೊಂಡಿದ್ದು, ಇವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ರವಾನಿಸಲಾಗಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ