Breaking News

ಹನುಮನ ಜನ್ಮಸ್ಥಳದ ದೇಗುಲದ ಪ್ರಧಾನ ಅರ್ಚಕರನ್ನು ತೆಗೆಯಬೇಡಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಆದೇಶ

Spread the love

ನವದೆಹಲಿ: ಶ್ರೀರಾಮನ ಭಕ್ತ ಹನುಮ ಜನಿಸಿದ ಸ್ಥಳ ಎಂದೇ ಖ್ಯಾತಿಯಾಗಿರುವ ಕೊಪ್ಪಳದ ಅಂಜನಾದ್ರಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಈ ಕುರಿತ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಹನುಮನ ಜನ್ಮಸ್ಥಳದ ದೇಗುಲದ ಪ್ರಧಾನ ಅರ್ಚಕರನ್ನು ತೆಗೆಯಬೇಡಿ ಎಂದು ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ.

ಕರ್ನಾಟಕ ಸರ್ಕಾರಕ್ಕೆ ನೋಟಿಸ್: ದೇವಸ್ಥಾನದ ಮುಖ್ಯ ಅರ್ಚಕ ವಿದ್ಯಾದಾಸ್​ ಬಾಬಾ ಅವರು, ತಮ್ಮ ಪೂಜೆಗೆ ಸರ್ಕಾರ ಅಡ್ಡಿ ಮಾಡುತ್ತಿದೆ. ಹೈಕೋರ್ಟ್​ ಆದೇಶ ಉಲ್ಲಂಘಿಸಲಾಗಿದೆ ಎಂದು ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು (ಮಂಗಳವಾರ) ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ದೀಪಂಕರ್ ದತ್ತ ಅವರಿದ್ದ ಪೀಠವು, ಕರ್ನಾಟಕ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿತು.

ವಿವಾದದ ಕುರಿತು ಹೈಕೋರ್ಟ್​ ನೀಡಿದ ಆದೇಶವನ್ನು ಪಾಲಿಸಬೇಕು. ವಿದ್ಯಾದಾಸ್​ ಬಾಬಾ ಅವರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರ್ಟ್​ ಹೇಳಿದೆ.

ಅರ್ಚಕರ ಪೂಜೆಗೆ ಅಡ್ಡಿ: ಅರ್ಜಿದಾರರ ಪರವಾಗಿ ಹಾಜರಿದ್ದ ವಕೀಲ ವಿಷ್ಣು ಶಂಕರ್ ಜೈನ್, ತಮ್ಮ ಕಕ್ಷಿದಾರರು ದೇವಾಲಯದಲ್ಲಿ ಮುಖ್ಯ ಅರ್ಚಕರಾಗಿದ್ದಾರೆ. ರಾಮನಂದಿ ಸಂಪ್ರದಾಯದ ಅವ ಕುಟುಂಬವು 120 ವರ್ಷಗಳಿಂದ ಈ ದೇವಾಲಯದಲ್ಲಿ ಪೂಜೆ ಸಲ್ಲಿಸುತ್ತಿದೆ. ಇದೀಗ, ರಾಜ್ಯ ಸರ್ಕಾರ ದೇವಾಲಯವನ್ನು ತನ್ನ ಸುಪರ್ದಿಗೆ ಪಡೆದು, ಅರ್ಚಕರ ಪೂಜೆಗೆ ನಿರಾಕರಿಸುತ್ತಿದೆ ಎಂದು ವಾದಿಸಿದರು.

2018ರಲ್ಲಿ ಇದ್ದಕ್ಕಿದ್ದಂತೆ ಈ ದೇವಾಲಯವನ್ನು ಸಂಪೂರ್ಣವಾಗಿ ಕಾನೂನುಬಾಹಿರ ರೀತಿಯಲ್ಲಿ ಸರ್ಕಾರವು ಸ್ವಾಧೀನಪಡಿಸಿಕೊಂಡಿದೆ. ಇದು ಕರ್ನಾಟಕ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ವಕೀಲರು ಕೋರ್ಟ್​ ಗಮನಕ್ಕೆ ತಂದರು


Spread the love

About Laxminews 24x7

Check Also

20 ವರ್ಷಕ್ಕೂ ಮೇಲ್ಪಟ್ಟು ಸೆರೆವಾಸಕ್ಕೆ ಗುರಿಯಾದವರ ಶಿಕ್ಷೆ ಮಾಫಿ ಮನವಿ ತಿರಸ್ಕರಿಸಬೇಕೆಂಬ ನಿಯಮವಿಲ್ಲ: ಹೈಕೋರ್ಟ್

Spread the loveಬೆಂಗಳೂರು: ಇಪ್ಪತಕ್ಕೂ ಹೆಚ್ಚು ವರ್ಷಗಳ ಕಾಲ ಸೆರೆವಾಸಕ್ಕೊಳಗಾಗುವ ಅಪರಾಧಿಗಳು ನಿಗದಿತ ಅವಧಿಯ ಜೈಲು ವಾಸದ ಬಳಿಕ ಶಿಕ್ಷೆಯ ಮಾಫಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ