Breaking News

ಪ್ರತಿ ತಾಲೂಕಿನಲ್ಲೂ ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ

Spread the love

ಬೆಂಗಳೂರು, ಮೇ 28: ಪ್ರತಿ ತಾಲೂಕಿನಲ್ಲೂ ಖರೀದಿ ಕೇಂದ್ರ ಸ್ಥಾಪಿಸಲು ಕರ್ನಾಟಕ ಹೈಕೋರ್ಟ್ (High Court) ಬುಧವಾರ ಆದೇಶ ಹೊರಡಿಸಿದೆ.

ರೈತ ಸೇನೆ ಸಲ್ಲಿಸಿದ್ದ ಪಿಐಎಲ್ ಅರ್ಜಿ (PIL application) ವಿಚಾರಣೆ ಮಾಡಿದ ಹೈಕೋಟ್​​, ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಆರಂಭಿಸಲು ಸಿಜೆ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೆ.ವಿ.ಅರವಿಂದ್​​ರಿದ್ದ ಪೀಠ ಆದೇಶ ನೀಡಿದೆ.ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು.

ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲೂಕಿನಲ್ಲೂ ಒಂದು ಖರೀದಿ ಕೇಂದ್ರ ಸ್ಥಾಪಿಸಬೇಕು. ನಿಗದಿತ ಅವಧಿಗಿಂತ ಕನಿಷ್ಟ 2 ತಿಂಗಳು ಖರೀದಿ ಕೇಂದ್ರದ ಅವಧಿ ವಿಸ್ತರಿಸಬೇಕು ಎಂದು ಪೀಠ ನಿರ್ದೇಶನ ನೀಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ