ಮಂಗಳೂರು, (ಮೇ 29): ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆಯಾಗಿ ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಕಡಲನಗರಿ ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ.
ನಿನ್(ಮೇ 27) ಮಧ್ಯಾಹ್ನ ಮುಸ್ಲಿಂ ಯುವಕನೊಬ್ಬನನ್ನ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಅಬ್ದುಲ್ ರಹಿಮಾನ್ (32) (Bantwal Abdul Rehman) ಎಂಬಾತ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬಂಟ್ವಾಳ ತಾಲೂಕಿನ ಕೂರಿಯಾಳ ಸಮೀಪದ ಈರಕೋಡಿಯ ಕೊಳತ್ತಮಜಲ್ ನಿವಾಸಿ. ಪಿಕಪ್ ವಾಹನ ಓಡಿಸಿ ಜೀವನ ಸಾಗಿಸುತ್ತಿದ್ದ. ನಿನ್ನೆ (ಮೇ 27) ಒಂದು ಲೋಡ್ ಮರಳು ಬೇಕು ಎಂದು ದುಷ್ಕರ್ಮಿಗಳು ಕರೆಸಿಕೊಂಡಿದ್ದು, ಅನ್ಲೋಡ್ ಆಗುತ್ತಿದ್ದಂತೆಯೇ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದಿದ್ದಾರೆ.
ಇದರಿಂದ ಎಲ್ಲೆಲ್ಲೂ ಆಕ್ರೋಶ ಭುಗಿಲೆದ್ದಿದೆ. ಶಾಂತವಾಗಿದ್ದ ಕರಾವಳಿ ಮತ್ತೆ ಕೊತ ಕೊತ ಅಂತಿದೆ.ಯುವಕನ ಬರ್ಬರ ಕೊಲೆಯಿಂದ ಇಡೀ ಮಂಗಳೂರಿಗೆ ಮಂಗಳೂರೇ ಪ್ರಕ್ಷುಬ್ಧಗೊಂಡಿದೆ.ರಹಿಮಾನ್ ಹತ್ಯೆ ಸುದ್ದಿ ಕಾಡ್ಗಿಚ್ಚನಂತೆ ಹಬ್ಬುತ್ತಿದ್ದಂತೆಯೇ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆ ಬಳಿ ರಾತ್ರಿ ಸಾಕಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿದ್ರು. ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದಲೇ ಅಮಾಯಕ ಮುಸ್ಲಿಂ ಯುವಕನ ಹತ್ಯೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೇ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿ ಪೊಲೀಸರ ವಿರುದ್ಧವೇ ಕಿಡಿಕಾರಿದರು.
Laxmi News 24×7