ಕೊಡಗು, ಮೇ 28: ಜಿಲ್ಲೆಯಲ್ಲಿ ಮಳೆ (rain) ಅಬ್ಬರ ಕೊಂಚ ಕಡಿಮೆ ಆದರೂ ಅಲ್ಲಲ್ಲಿ ಅವಾಂತರಗಳು ಮುಂದುವರೆದಿವೆ. ಬಹಳಷ್ಟು ಗ್ರಾಮಗಳಲ್ಲಿ ಇನ್ನೂ ನದಿಗಳು ಅಪಾಯ ಮಟ್ಟದಲ್ಲೇ ಹರಿಯುತ್ತಿವೆ. ಹಾಗಾಗಿ ಪ್ರವಾಹದ ಆತಂಕದಿಂದ ಇನ್ನೂ ಜನರು ದೂರವಾಗಿಲ್ಲ. ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ನಾಳೆ, ನಾಡಿದ್ದು ಅಂದರೆ ಗುರುವಾರ, ಶುಕ್ರವಾರ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ 2 ದಿನ ರಜೆ (holiday) ನೀಡಿ ಡಿಸಿ ವೆಂಕಟರಾಜಾ ಆದೇಶಿಸಿದ್ದಾರೆ.ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಎರಡಿ ದಿನ ರಜೆ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಜಿಲ್ಲೆಗೆ ಆಗಮಿಸಿರುವ ಎನ್ಡಿಆರ್ಎಫ್ ಯಾವುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರೋದಾಗಿ ಹೇಳಿದೆ.
