Breaking News

ಪ್ರೀತಿಸಿ ಮದ್ವೆಯಾಗಿದ್ದವಳನ್ನ 10 ಬಾರಿ ಇರಿದು ಕೊಂದ ಪತಿ

Spread the love

ಚಿಕ್ಕಮಗಳೂರು, (ಮೇ 28): ಪ್ರೀತಿಸಿ (Love) ಮದುವೆಯಾಗಿದ್ದ ಪತ್ನಿಯನ್ನು (Wife) ಚಾಕು ಮನಸ್ಸೋ ಇಚ್ಛೆ ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದೆ. ಇನ್ನು ಪತಿ ಅವಿನಾಶ್ (32) ಎನ್ನುವಾತ ಚಾಕುವಿನಿಂದ ಬರೋಬ್ಬರಿ ಹತ್ತು ಬಾರಿ ಚುಚ್ಚಿ ಕೊಂದು ಎಸ್ಕೇಪ್ ಆಗಿದ್ದಾನೆ.

ಕೀರ್ತಿ ಪೋಷಕರ ವಿರೋಧದ ನಡುವೆಯೂ ಆಕೆಯನ್ನು ನಾಲ್ಕು ವರ್ಷದ ಹಿಂದೆಯೇ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಇಬ್ಬರು ನಡುವೆ ಶುರುವಾದ ಸಣ್ಣ ಜಗಳದಲ್ಲಿ ಅವಿನಾಶ್, ಪ್ರೀತಿ ನಂಬಿ ಬಂದಿದ್ದ ಕೀರ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.ಕೀರ್ತಿ ಹಾಗೂ ಅವಿನಾಶ್ ಪರಸ್ಪರ ಪ್ರೀತಿಸಿದ್ದು,

ನಾಲ್ಕು ವರ್ಷದ ಹಿಂದೆಷ್ಟೇ ಮದುವೆಯಾಗಿದ್ದು, ದಂಪತಿಗೆ ಎರಡೂವರೆ ವರ್ಷದ ಹೆಣ್ಣು ಸಹ ಮಗುವಿದೆ. ಅಲ್ಲದೇ ಕಳೆದ ವಾರ ಇಬ್ಬರೂ ಸಂಬಂಧಿಕರ ಮದುವೆಯಲ್ಲಿ ಖುಷಿ ಖುಷಿಯಲ್ಲಿ ಪಾಲ್ಗೊಂಡಿದ್ದರು. ಆದ್ರೆ, ಅದೋನಾಯ್ತೋ ಏನೋ ಇಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಅವಿನಾಶ್​, ಪತ್ನಿ ಕೀರ್ತಿಗೆ ಚಾಕುವಿನಿಂದ ಮನಸ್ಸೋ ಇಚ್ಛೇ ದಾಳಿ ಮಾಡಿ ಕೊಲೆ ಮಾಡಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕೀರ್ತಿ ಮೃತದೇಹವನ್ನು ರವಾನೆ ಮಾಡಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ