Breaking News
Home / Uncategorized / ಅಸಮಾಧಾನಗೊಂಡಿರುವ ಶಾಸಕರಿಗೆ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್

ಅಸಮಾಧಾನಗೊಂಡಿರುವ ಶಾಸಕರಿಗೆ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್

Spread the love

ಬೆಂಗಳೂರು,ಡಿ.17- ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವ ಶಾಸಕರಿಗೆ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ.

13 ಮಂದಿ ಬಿಜೆಪಿ ಶಾಸಕರಿಗೆ ಸಂಪುಟ ದರ್ಜೆಯ ನಿಗಮ ಮಂಡಳಿ ಸ್ಥಾನ ಹಾಗೂ ನಾಲ್ವರಿಗೆ ರಾಜ್ಯ ದರ್ಜೆಯ ಸ್ಥಾನಮಾನ ನೀಡುವಂತೆ ಆದೇಶಿಸಿದ್ದಾರೆ. ಸಂಪುಟ ಸಭೆಯಲ್ಲಿ ಯಾವುದೇ ಸ್ಥಾನಮಾನ ಲಭ್ಯವಾಗದ ಬಿಜೆಪಿ ಶಾಸಕರನ್ನು ಗುರುತಿಸುವ ಸಲುವಾಗಿ ಮುಖ್ಯಮಂತ್ರಿ ಯಡಿಯುರಪ್ಪ ಅವರು, 13 ಶಾಸಕರನ್ನು ರಾಜ್ಯ ಆಡಳಿತ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಈ ಶ್ರೇಣಿಯು ಕ್ಯಾಬಿನೆಟ್ ಮಂತ್ರಿಯ ಸ್ಥಾನಕ್ಕೆ ಸಮನಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ನಡುವೆ 14ನೇ ನೇಮಕಾತಿಯಾಗಿ ಮಾಹಿತಿ ವಿಭಾಗದ ನಿವೃತ್ತ ಅಧಿಕಾರಿ ಎನ್.ಭೃಂಗೇಶ್ ಅವರನ್ನು ಸಿಎಂ ಅವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಸಂಪುಟ ದರ್ಜೆ ಸ್ಥಾನ ನೀಡಲಾಗಿದೆ.

# ಸಂಪುಟ ದರ್ಜೆಯ ಸ್ಥಾನಮಾನ ಪಡೆದವರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ-ಎಂ.ಚಂದ್ರಪ್ಪ, ಕರ್ನಾಟಕ ಆದಿ ಜೋಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ -ಐಹೊಳೆ ದುರ್ಯೋಧನ, ಕರ್ನಾಟಕ ರಾಜ್ಯ ಅನುಸೂಚಿತ ಜÁತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧ್ಯಕ್ಷ -ನೆಹರು ಓಲೇಕಾರ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ- ನರಸಿಂಹ ನಾಯಕ್ (ರಾಜು ಗೌಡ)

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷ-ಕೆ.ಶಿವನಗೌಡ ನಾಯಕ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ -ಕಳಕಪ್ಪ ಬಂಡಿ, ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ – ಶಂಕರ ಪಾಟೀಲ್ ಮುನೇನಕೊಪ್ಪ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ – ಕೆ. ಮಾಡಾಳು ವಿರೂಪಾಕ್ಷಪ್ಪ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ – ಸಿದ್ದು ಸವದಿ,

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಪಿ.ರಾಜೀವ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ವಿ.ರಾಮಚಂದ್ರ ಅವರು ಸಂಪುಟ ದರ್ಜೆಯ ಸ್ಥಾನಮಾನ ಪಡೆದವರು.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕಲಬುರಗಿ) ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೇಲ್ಕೂರ್, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್, ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ಮಂಡಳಿ (ಹುಬ್ಬಳ್ಳಿ) ಅಧ್ಯಕ್ಷ -ಎ.ಎಸ್.ಜಯರಾಮ್, ಡಾ.ಬಾಬುಜಗ ಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಎನ್.ಲಿಂಗಣ್ಣ ಅವರು ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ಪಡೆದಿದ್ದಾರೆ.


Spread the love

About Laxminews 24x7

Check Also

ಮಳೆ.. ಮಳೆ.. ಆರ್‌ಸಿಬಿ VS ಚೆನ್ನೈ ಮ್ಯಾಚ್ ರದ್ದು?

Spread the love ಮಳೆ.. ಮಳೆ.. ಎಲ್ಲೆಲ್ಲೂ ಮಳೆಯ ಅಬ್ಬರ ಶುರುವಾಗಿದೆ. ಅದರಲ್ಲೂ ಬೆಂಗಳೂರು & ಚೆನ್ನೈ ನಡುವೆ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ