Breaking News

ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು…

Spread the love

ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು…
ಬಾಗಲಕೋಟೆಯ ಜಿಲ್ಲೆಯ ಚಿಂಚಲಕಟ್ಟಿಯಲ್ಲಿ ನಿರವ ಮೌನ…
ಸೇನೆಗೆ ಸೇರಿ ಮೂರು ತಿಂಗಳಲ್ಲಿ ಬಾಗಲಕೋಟೆ ಮೂಲದ ಯೋಧ ಹೃದಯಾಘಾತದಿಂದ ಸಾವಪ್ಪಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಚಿಂಚಲಕಟ್ಟಿ ಎಲ್‌.ಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಸೇನಾ ತರಬೇತಿ ವೇಳೆ ಹೃದಯಾಘಾತದಿಂದ ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ.
ಕಳೆದ ಮಾರ್ಚ್‌ನಲ್ಲಿ ಅಸ್ಸಾಂ ರೈಫಲ್ಸ್‌ನಲ್ಲಿ ಸೇನೆಗೆ ಆಯ್ಕೆಯಾಗಿದ್ದ ಉಪೇಂದ್ರ, ಮೂರು ತಿಂಗಳಿನಿಂದ ಚಂಡೀಗಢದಲ್ಲಿ ಸೇನಾ ತರಬೇತಿ ಪಡೆಯುತ್ತಿದ್ದರು. ಇವರ ‘ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಿಗ್ಗೆ ವಿಮಾನದ ಮೂಲಕ ಬೆಳಗಾವಿಗೆ ತಂದು, ಅಲ್ಲಿಂದ ಸೇನಾ ವಾಹನದಲ್ಲಿ ಕೆರೂರ ಪಟ್ಟಣಕ್ಕೆ ತರಲಾಯಿತು.
ಗ್ರಾಮದಲ್ಲಿ ಯೋಧನ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಕರೂರ ಉಪತಹಶೀಲ್ದಾರ್ ವೀರೇಶ ಬಡಿಗೇರ ತಿಳಿಸಿದ್ದಾರೆ.

Spread the love

About Laxminews 24x7

Check Also

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು:

Spread the loveಬೆಳಗಾವಿ ಜಿಲ್ಲೆ, ಕಾಗವಾಡ ತಾಲೂಕಿನ ಬಸವೇಶ್ವರ (ಕೆಂಪವಾಡ) ಹಾಗೂ ರಾಮದುರ್ಗಾ ತಾಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ