Breaking News

ಪರೀಕ್ಷೆ ಬರೆದು ಒಂದೇ ಗಂಟೆಯಲ್ಲಿ 50 ಸಾವಿರ ವಿದ್ಯಾರ್ಥಿಗಳ ಫಲಿತಾಂಶ:VTU RESULT RECORD

Spread the love

ಬೆಳಗಾವಿ: ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸುವ ಮೂಲಕ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಹೊಸ ಇತಿಹಾಸ ನಿರ್ಮಿಸಿದೆ.

ಮೇ 30ರಂದು ಅಂತಿಮ ಸೆಮಿಸ್ಟರ್‌ನ 50,321 ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ ‌ಎಂದು ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ ತಿಳಿಸಿದ್ದಾರೆ.

ಕಳೆದ ವರ್ಷ ಮೂರು ಗಂಟೆಯಲ್ಲಿ ಫಲಿತಾಂಶ ಪ್ರಕಟ: ಕಳೆದ ಬಾರಿ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಿ ದಾಖಲೆ ಬರೆದಿದ್ದ ವಿಟಿಯು, ಈ ಬಾರಿ ಕೇವಲ ಒಂದೇ ಗಂಟೆಯಲ್ಲಿ ಫಲಿತಾಂಶ ನೀಡಿ ತನ್ನದೇ ದಾಖಲೆಯನ್ನು ಮುರಿದು ಹೊಸ ಮುನ್ನುಡಿ ಬರೆದಿದೆ. ಈ ಹಿಂದೆ 2019 ರ ಬ್ಯಾಚ್‌ನ ಅಂತಿಮ ಸೆಮಿಸ್ಟರ್‌ನ ಪರೀಕ್ಷೆ ಮುಗಿದ ಎರಡು ದಿನಗಳಲ್ಲಿ 43,662 ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು 2023 ಮೇ 30ರಂದು ಬಿಡುಗಡೆಗೊಳಿಸಿತ್ತು. ಇದಾದ ಬಳಿಕ 2020ರ ಬ್ಯಾಚ್‌ನ ಪರೀಕ್ಷೆ ಮುಗಿದ 3 ಗಂಟೆಯೊಳಗೆ 37,011 ವಿದ್ಯಾರ್ಥಿಗಳ ಫಲಿತಾಂಶವನ್ನು 2024 ಮೇ 30ರಂದು ಪ್ರಕಟಿಸಿ ದಾಖಲೆ ಮಾಡಿತ್ತು.

ಪರೀಕ್ಷೆ ಬರೆದು ಗಂಟೆಯಲ್ಲೇ ವಿದ್ಯಾರ್ಥಿಗಳ ವಾಟ್ಸಾಪ್​ಗೆ ಫಲಿತಾಂಶ: ಈಗ ಮೇ 30ರಂದು 2021ರ ಬ್ಯಾಚ್‌ನ ಕೊನೆಯ ಸೆಮಿಸ್ಟರ್‌ನ 50,321 ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶವನ್ನು ಕೇವಲ 1 ಗಂಟೆಯೊಳಗೆ ಪ್ರಕಟಿಸಿ ಮತ್ತೊಂದು ಐತಿಹಾಸಿಕ ದಾಖಲೆಯನ್ನು ವಿಟಿಯು ಬರೆದಿದೆ. ಅಲ್ಲದೇ ಈ ಫಲಿತಾಂಶವನ್ನು ಎಲ್ಲ ವಿದ್ಯಾರ್ಥಿಗಳಿಗೆ ಅವರ ವಾಟ್ಸಪ್‌ನಲ್ಲಿ ಕಳುಹಿಸಲಾಗಿದೆ ಎಂದು ಪ್ರೊ. ಎಸ್. ವಿದ್ಯಾಶಂಕರ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ