Breaking News

ಲೋಕಾಯುಕ್ತ ಇನ್ಸ್​ಪೆಕ್ಟರ್​​ಗೆ ಲಂಚ ನೀಡಲು ಬಂದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿ ಅರೆಸ್ಟ್

Spread the love

ಮಂಗಳೂರು: ದಾಳಿ ಮಾಡದಂತೆ ಲೋಕಾಯುಕ್ತ ಇನ್ಸ್​ಪೆಕ್ಟರ್​ಗೆ ಲಂಚ ನೀಡಲು ಹೋದ ಆರೋಪದ ಮೇಲೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಇಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಕರ್ತವ್ಯದಲ್ಲಿರುವಾಗ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಕೋಟೆಕಣಿ ಪ್ರಶಾಂತ್ ಆಯಿಲ್ ಇಂಡಸ್ಟ್ರೀಸ್ ಮಾಲೀಕ ಪ್ರವೀಣ್ ನಾಯ್ಕ್ ಮತ್ತು ಗಜೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಬಂದಿದ್ದರು.

ಪೊಲೀಸ್ ನಿರೀಕ್ಷಕರಿಗೆ ಮಾಹಿತಿ ನೀಡಬೇಕು ಎಂಬುದಾಗಿ ಠಾಣೆಯ ಸಿಬ್ಬಂದಿಯವರಲ್ಲಿ ತಿಳಿಸಿ, ನಂತರ ಗಜೇಂದ್ರ ಅವರು ಪೊಲೀಸ್ ಇನ್ಸ್​ಪೆಕ್ಟರ್ ಅವರಲ್ಲಿ ಮಾತನಾಡುತ್ತಾ ತನ್ನ ವಿರುದ್ಧ ಹಾಗೂ ತನ್ನ ಇಲಾಖೆಯ ವಿರುದ್ಧ ಲೋಕಾಯುಕ್ತ ಸಂಸ್ಥೆಯಿಂದ ಯಾವುದೇ ಪ್ರಕರಣ ದಾಖಲಿಸಬಾರದು ಅಥವಾ ದಾಳಿ ಮಾಡಬಾರದು ಎಂಬುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ತಾನು 3 ತಿಂಗಳಿಗೊಮ್ಮೆ 25,000 ರೂ ಹಣವನ್ನು ಲಂಚವಾಗಿ ಮಂಗಳೂರು ಲೋಕಾಯುಕ್ತ ಠಾಣೆಗೆ ನೀಡುವುದಾಗಿ ಲಂಚದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಗಜೇಂದ್ರ ಅವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ