Breaking News

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ….

Spread the love

ಬಾಗಲಕೋಟೆ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ….
ಬಾಗಲಕೋಟೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ ನಡೆಯಿತು.
ಕರ್ನಾಟಕ ರಾಜ್ಯ ವಸತಿ ಶಾಲೆಗಳ ಸಂಘದಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕಿಗೆ ಆಗ್ರಹಿಸಲಾಯಿತು ವಸತಿ ಶಾಲೆ ಮತ್ತು ಸಿಬ್ಬಂದಿಗಳನ್ನ ಆಯಾ ಇಲಾಖೆ ವಶಕ್ಕೆ ಒಪ್ಪಿಸುವುದು, ಜ್ಯೋತಿ ಸಂಜೀವಿನಿ ಅನುಷ್ಠಾನ & ವಿಶೇಷ ಭತ್ಯೆ ಜಾರಿಗೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಮನವಿ ಮಾಡಲಾಗಿದೆ.
ಬೇಕೆ ಬೇಕು ನ್ಯಾಯ ಬೇಕು ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೌಕರರೊಬ್ಬರು ಮಾತನಾಡಿ ಎಲ್ಲರಿಗೂ ಸೌಲಭ್ಯಗಳನ್ನು ಕೊಡುತ್ತಿರುವ ಸರ್ಕಾರವು ಹಲವಾರು ವರ್ಷಗಳಿಂದ ದುಡಿಯುತ್ತಿರುವ ನಮ್ಮ ಕಡೆ ಗಮನಹರಿಸುತ್ತಿಲ್ಲ ನಾವೆಲ್ಲ ತೀವ್ರ ತೊಂದರೆ ಅನುಭವಿಸುತ್ತಿದ್ದು ಆದಷ್ಟು ಬೇಗ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು
.
ನಂತರ ಜಿಲ್ಲಾ ಆಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ನೌಕರರು ಭಾಗವಹಿಸಿದ್ದರು.

Spread the love

About Laxminews 24x7

Check Also

ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!!

Spread the love ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ