Breaking News

ಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆದ 7 ವರ್ಷದ ಬಾಲಕಿ ಸಾವು

Spread the love

ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗೆ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಬೈಕ್‌ನಿಂದ ಬಿದ್ದ ಕೂಡಲೇ ಕ್ಯಾಂಟರ್​ ಹರಿದು ಮಗು ಸಾವನ್ನಪ್ಪಿತ್ತು. ಈ ಘಟನೆ ಮಾಸುವ ಮುನ್ನವೇ ಮಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಕಾಲಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕಿ ಮೃತಪಟ್ಟಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.

ಬಾಲಕಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ, ಪೋಷಕರು ಸೇರಿದಂತೆ ವಿವಿಧ ಸಂಘಟನೆಗಳು ಆಸ್ಪತ್ರೆ ಎದುರು ಸೇರಿ ಪ್ರತಿಭಟನೆ ನಡೆಸಿದರು.

ಮಳವಳ್ಳಿ ತಾಲೂಕಿನ ನೆಲ್ಲೂರು ಗ್ರಾಮದ ಲಿಂಗರಾಜು ಹಾಗೂ ರಂಜಿತಾ ದಂಪತಿಯ ಪುತ್ರಿ ಸಾನ್ವಿ, ಕಳೆದ ವಾರ ಮನೆಯಲ್ಲಿ ಕಾಲಿನ ಮೇಲೆ ಟೈಲ್ಸ್ ಬಿದ್ದು ಗಾಯಗೊಂಡಿದ್ದಳು. ಮಳವಳ್ಳಿ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ನೋವು ಕಡಿಮೆಯಾಗದ ಕಾರಣ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಎಕ್ಸ್ ರೇ ಮಾಡಿದ ವೈದ್ಯರು ಪಾದದ ಮೂಳೆ ಮುರಿದಿರುವುದಾಗಿ ತಿಳಿಸಿ ಪೋಷಕರ ಅನುಮತಿ ಪಡೆದು ಆಪರೇಷನ್ ಮಾಡಿದ್ದರು.

ನಮ್ಮ ಮಗಳ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಸಂಘಟನೆಗಳ ಜೊತೆಗೆ ಮಿಮ್ಸ್ ಆಸ್ಪತ್ರೆ ಮುಂದೆ ಪ್ರತಿಭಟಿಸಿ, ವೈದ್ಯರ ವಿರುದ್ದ ಸೂಕ್ತ ಕ್ರಮ ಜರುಗಿಸಿ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.

ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಶವವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಲು ಕೊಂಡೊಯ್ಯಲಾಗಿದೆ.

ಬಾಲಕಿ ಸಾವಿನ ಕುರಿತು ಸರಿಯಾದ ತನಿಖೆ ನಡೆಸಿ, ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ನ್ಯಾಯ ಕೊಡಿಸುವುದಾಗಿ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭರವಸೆ ನೀಡಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ