Breaking News

ವಿಧಾನಸೌಧ ಪ್ರವಾಸ ಇಂದಿನಿಂದ ಆರಂಭ

Spread the love

ಬೆಂಗಳೂರು, ಜೂನ್​ 01: ರಾಜಕಾರಣಿಗಳು ಮತ್ತು ಅಧಿಕಾರಿಗಳಿಂದಲೇ ತುಂಬಿರುತ್ತಿದ್ದ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ (Vidhan Soudha) ಒಳಕ್ಕೆ ಇನ್ನು ಜನಸಾಮಾನ್ಯರು ಕೂಡ ಹೋಗಬಹುದಾಗಿದೆ. ದೂರದ ಊರಿನಿಂದ ಬೆಂಗಳೂರಿಗೆ (Bengaluru) ಬರುವ ಹಲವರಿಗೆ ವಿಧಾನಸೌಧ ನೋಡಬೇಕು ಎಂಬ ಆಸೆ ಇರುತ್ತದೆ. ಆದರೆ, ಇಷ್ಟು ದಿನಗಳ ಕಾಲ ಹೊರಗಿನಿಂದಲೇ ವಿಧಾನಸೌಧವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈಗ ವಿಧಾನಸೌಧದ ಒಳಗೆ ಹೋಗಬಹುದು. ಅದರೊಳಗೆಲ್ಲ ಸುತ್ತಾಡಬಹುದು. ಆ ಭವ್ಯ ಕಟ್ಟಡವನ್ನು ಮುಟ್ಟಬಹುದು. ಹೌದು, ಭವ್ಯ ವಿಧಾನಸೌಧ ವೀಕ್ಷಣೆಗೆ ರಾಜ್ಯ ಸರ್ಕಾರ ‘ಮಾರ್ಗದರ್ಶಿ ಪ್ರವಾಸ’ (ಗೈಡ್ ಟೂರ್) ಹೆಸರಿನಲ್ಲಿ ಪ್ರವಾಸ ಭಾಗ್ಯ ಕಲ್ಪಿಸಿದೆ. ವಿಧಾನಸೌಧ ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದೆ.

ಪ್ರತಿ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರ 30 ಸದಸ್ಯರ 10 ತಂಡಗಳಿಗೆ ವಿಧಾನಸೌಧ ವೀಕ್ಷಣೆಗೆ ಅವಕಾಶ ಇರುತ್ತದೆ. ಅಂದರೆ, ದಿನಕ್ಕೆ 300 ಮಂದಿಗೆ ಮಾತ್ರ ವಿಧಾ‌ನಸೌಧ ನೋಡುವ ಅವಕಾಶ ನೀಡಲಾಗಿದೆ. ಇಂದಿನಿಂದ ಪ್ರವಾಸ ಆರಂಭವಾಗಿದ್ದು, ಪ್ರವಾಸಿಗರಿಗೆ ವಿಧಾನಸೌಧದ ಮಹತ್ವ, ಇತಿಹಾಸ, ಪರಂಪರೆ, ಅಧಿವೇಶನ ಸಭಾಂಗಣ, ಭವ್ಯ ಮೆಟ್ಟಿಲುಗಳ ವಿವರಣೆಯನ್ನು ಮಾರ್ಗದರ್ಶಿಗಳು ನೀಡುತ್ತಾರೆ.

ವಿಧಾನಸೌಧದ ಮಹತ್ವವನ್ನು ಪ್ರವಾಸಿಗರಿಗೆ ತಿಳಿಸಿಕೊಡಲು ಸದ್ಯ 10 ಗೈಡ್​ಗಳನ್ನು ನೇಮಕ ಮಾಡಲಾಗಿದೆ. ಇವರು ಕನ್ನಡ ಮತ್ತು ಇಂಗ್ಲಿಷ್​ ಭಾಷೆಯಲ್ಲಿ ವಿವರಣೆ ನೀಡುತ್ತಾರೆ. ವಿಧಾನಸೌಧ ವೀಕ್ಷಣೆಗೆ ಆನ್​ಲೈನ್​ನಲ್ಲಿ ಮುಂಚಿತವಾಗಿ ಟಿಕೆಟ್ ಕಾಯ್ದಿರಿಸಬೇಕು. https://kstdc.co/activities ವೆಬ್​ಸೈಟ್​ನಲ್ಲಿ ಟಿಕೆಟ್ ಬುಕ್ ಮಾಡಬೇಕು. 15 ವರ್ಷದೊಳಗಿನ ಮಕ್ಕಳು, ಎಸ್​ಎಸ್​ಎಲ್​ಸಿ ವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಇರಲಿದೆ. 16 ವರ್ಷ ಮೇಲ್ಪಟ್ಟ ಪ್ರವಾಸಿಗರಿಗೆ ತಲಾ 50 ರೂಪಾಯಿ ಟಿಕೆಟ್​ ನಿಗದಿ ಮಾಡಲಾಗಿದೆ. ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ