Breaking News

ಕಮಲ್ ಹಾಸನ್​ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ನಟ ಕಿಶೋರ್

Spread the love

ಮೈಸೂರು: ಭಾಷೆಯನ್ನು ಭಾವುಕತೆಯಿಂದ ನೋಡದೆ ಭಾಷೆಯನ್ನು ಭಾಷೆಯಾಗಿ ನೋಡಬೇಕಿದೆ ಎಂದು ಹೇಳುವ ಮೂಲಕ ಕಮಲ್‌ ಹಾಸನ್ ಹೇಳಿಕೆಯನ್ನು ನಟ ಕಿಶೋರ್ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ ಅವಮಾನವಲ್ಲ. ಅದನ್ನು ಅವಹೇಳನಕಾರಿ ಎಂದು ಯಾಕೆ ಅಂದುಕೊಳ್ಳಬೇಕು? ಎಂದು ಪ್ರಶ್ನಿಸಿದರು.

ತುಂಬಾ ತಿಳಿದಂತಹ ಮನುಷ್ಯ ಏನೂ ಹೇಳಿದ್ದಾರೆ ಎಂದರೆ ಅದಕ್ಕೆ ತರ್ಕ ಇರಲಿದೆ. ಏನೋ ಅರ್ಥ ಇರಬೇಕು ಅದನ್ನು ಪ್ರಶ್ನೆ ಕೇಳಿ, ಏನು ಎಂಬುದನ್ನು ತಿಳಿದುಕೊಳ್ಳಬೇಕು. ಅವರ ಹೇಳಿಕೆಯನ್ನು ಅಷ್ಟೊಂದು ಭಾವುಕವಾಗಿ ನೋಡುವ ಅವಶ್ಯಕತೆ ಇಲ್ಲ. ಅಲ್ಲದೇ ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿರುತ್ತವೆ. ಹಾಗಂತ ಒಂದು ಭಾಷೆ ಮೇಲು, ಮತ್ತೊಂದು ಕೀಳು ಎಂಬುದಿಲ್ಲ. ಕನ್ನಡವು ಎಲ್ಲಿಂದಲೋ ಹುಟ್ಟಿ ಬಂದಿದೆ.

ಹಾಗೆ ತಮಿಳು ಸಹ ಎಲ್ಲಿಂದಲೂ ಹುಟ್ಟಿ ಬಂದಿದೆ. ಹೀಗಾಗಿ ಇಂತಹ ವಿಷಯದಲ್ಲಿ ಭಾವುಕವಾಗಿ ಜನರನ್ನು ರೊಚ್ಚಿಗೆಬ್ಬಿಸಬಾರದು ಎಂದು ಅಭಿಪ್ರಾಯಪಟ್ಟರು.ಈಗಾಗಲೇ ನಮ್ಮಲ್ಲಿ ಭಾಷೆ, ಜಾತಿ, ಧರ್ಮ ಹೀಗೆ ಎಲ್ಲವನ್ನು ಬಂಡವಾಳ ಮಾಡಿಕೊಂಡು ರಾಜಕೀಯ ಮಾಡಿಕೊಂಡಿದ್ದಾರೆ. ಕಮಲ್‌ ಹಾಸನ್‌ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ, ತಮಿಳಿನಿಂದ ಕನ್ನಡ ಬಂದಿದ್ದರೆ ಸರಿ. ಭಾಷೆಗಳ ಬಗ್ಗೆ ಬಹಳಷ್ಟು ಥಿಯರಿಗಳಿವೆ. ಅದರಂತೆ ಕಮಲ್ ಹಾಸನ್ ಹೇಳಿರುವುದು ಸಹ ಒಂದು ಥಿಯರಿ ಇರಬಹುದಾಗಿದ್ದು, ಅವರ ಥಿಯರಿ ಏನು ಎಂದು ತಿಳಿದುಕೊಳ್ಳೋಣ. ನನ್ನ ಅಭಿಪ್ರಾಯದಲ್ಲಿ ಇದು ಅವಮಾನವಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ವಡಗಾಂವನ ಶ್ರೀ ಮಲ್ಲಿಕಾರ್ಜುನ ಮಂದಿರದಲ್ಲಿ ಶಿವರಾತ್ರಿ ಸಂಭ್ರಮ: 20 ಸಾವಿರ ಭಕ್ತರಿಂದ ಮಹಾಪ್ರಸಾದ ಸ್ವೀಕಾರ

Spread the loveವಡಗಾಂವನ ಶ್ರೀ ಮಲ್ಲಿಕಾರ್ಜುನನಿಗೆ ಶಿವರಾತ್ರಿಯ ಅದ್ಧೂರಿ ಉತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿ ಮೆರವಣಿಗೆ 20 ಸಾವಿರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ