Breaking News

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಪ್ರಕರಣ ದಾಖಲ

Spread the love

ಬೆಂಗಳೂರು, ಜೂನ್ 2: ಟೀಮ್ ಇಂಡಿಯಾ (Team India) ಕ್ರಿಕೆಟಿಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದ ಆರೋಪದಲ್ಲಿ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ‘ದ ಒನ್ 8 ಕಮ್ಯೂನ್’ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ) ಕಾಯ್ದೆ (COTPA Act) ಅಡಿ ಪ್ರಕರಣ ದಾಖಲಿಸಲಾಗಿದೆ.

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಪ್ರಕರಣ ದಾಖಲಿಸಲು ಕಾರಣವೇನು?

ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 29 ರಂದು ದಾಳಿ ಮಾಡಿದ್ದ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದರು. ನಂತರ, ನ್ಯಾಯಾಲಯದಿಂದ ಅನುಮತಿ ಪಡೆದು ಇದೀಗ ಕೇಸ್ ದಾಖಲಿಸಿದ್ದಾರೆ.

ಕೊಹ್ಲಿ ಪಬ್ ಮೇಲೆ ಪ್ರಕರಣ ದಾಖಲು ಇದೇ ಮೊದಲಲ್ಲ

ಅವಧಿ ಮೀರಿ ಪಬ್ ನಡೆಸುತ್ತಿದ್ದ ಆರೋಪದಲ್ಲಿ ಈ ಹಿಂದೆ ಕೂಡ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಕೇಸ್ ದಾಖಲಾಗಿತ್ತು. 2024ರ ಜುಲೈನಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈಗ ಮತ್ತೆ ಸ್ವಯಂಪ್ರೇರಿತವಾಗಿ ಎಫ್​ಐಆರ್ ದಾಖಲಿಸಿದ್ದಾರೆ.2024ರ ಡಿಸೆಂಬರ್​​ನಲ್ಲಿ ಇದೇ ಪಬ್​ಗೆ ಬಿಬಿಎಂಪಿ ಕೂಡ ನೋಟಿಸ್ ನೀಡಿತ್ತು. ಸುರಕ್ಷತಾ ಕ್ರಮಗಳನ್ನು ಅಳವಡಿಸಿಲ್ಲ. ಅಗ್ನಿ ಸುರಕ್ಷತಾ ಕ್ರಮ ಅಳವಡಿಸಿಲ್ಲ ಮತ್ತು ಅಗ್ನಿಶಾಮಕ ದಳದ ಪ್ರಮಾಣಪತ್ರ ಪಡೆದಿಲ್ಲ ಎಂಬ ಆರೋಪದಲ್ಲಿ ನೋಟಿಸ್ ನೀಡಲಾಗಿತ್ತು. ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ್ದ ದೂರಿನ ಆಧಾರದಲ್ಲಿ ಬಿಬಿಎಂಪಿ ಈ ಕ್ರಮ ಕೈಗೊಂಡಿತ್ತು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ