ಬೀದರ್, ಜೂನ್ 02: ಅಂದು ದೇಶದಲ್ಲಿ ಕೋವಿಡ್ ಸೋಂಕಿನಿಂದ ಮನುಕುಲವೇ ನಲುಗಿ ಹೋಗಿತ್ತು. ಅದೆಷ್ಟೋ ಜನರು ಕೆಲಸವಿಲ್ಲದೆ ಮನೆಯಲ್ಲಿ ಖಾಲಿ ಕುಳಿತು ಊಟಕ್ಕೂ ಪರದಾಟ ನಡೆಸಿದ್ದರು.
ಆದರೆ ಅದೇ ಸಮಯವನ್ನು ಬಳಸಿಕೊಂಡ ಮಹಿಳೆಯೊಬ್ಬರು (woman) ಕೈ ಕಸೂತಿ (Hand Embroidery) ಕಲಿತುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಂಡರು.
ತಾವು ಕಲಿತು ಸುಮ್ಮನಾಗದೇ ಇಂದು ಗ್ರಾಮೀಣ ಮಹಿಳೆಯರಿಗೆ ಕಲಿಸಿಕೊಡುತ್ತಿದ್ದಾರೆ. ಆ ಮೂಲಕ ಮಾದರಿ ಮಹಿಳೆಯಾಗಿದ್ದಾರೆ.ಕೊಲ್ಕತ್ತಾದ ಸುಕಲಿ ಎಂಬುವವರು ಹೊಟ್ಟೆ ಪಾಡಿಗಾಗಿ ಕರ್ನಾಟದ ಬೀದರ್ ಜಿಲ್ಲೆಗೆ 11 ವರ್ಷದ ಹಿಂದೆ ಆಗಮಿಸಿದ್ದು, ಭಾಲ್ಕಿ ತಾಲೂಕಿನ ಕೋಣಮೆಳಕುಂದಾ ಗ್ರಾದಮದಲ್ಲಿ ವಾಸವಾಗಿದ್ದಾರೆ.
ತಮ್ಮ ಕೈ ಕಸೂತಿ ಕೆಲಸದಿಂದಲ್ಲೇ ಸದ್ಯ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇವರು ತಯಾರಿಸುವ ಮನೆ ಅಲಂಕಾರಿಕಾ ವಸ್ತುಗಳಿಗಿದೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದೆ.