Breaking News

ದಿನಾಂಕ 1-6-2025 ರಂದು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ(ರಿ)ಬೆಂಗಳೂರು ರಾಜ್ಯಾದ್ಯಂತ ವಿವಿಧ ಬೇಡಿಕೆಗಳು ಈಡೇರಿಸುವಂತೆ ಅನಿರ್ದಿಷ್ಟಾವಧಿ ಮುಷ್ಕರ

Spread the love

ಘಟಪ್ರಭಾ:- ದಿನಾಂಕ 1-6-2025 ರಂದು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ(ರಿ)ಬೆಂಗಳೂರು ರಾಜ್ಯಾದ್ಯಂತ ವಿವಿಧ ಬೇಡಿಕೆಗಳು ಈಡೇರಿಸುವಂತೆ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡ ಹಿನ್ನಲೆ ಇಂದು ಘಟಪ್ರಭಾ ಪುರಸಭೆಯ ಪೌರಸೇವಾ ನೌಕರರು ಸೇರಿ ಅನಿರ್ದಿಷ್ಟಾವಧಿ ಮುಷ್ಕರದ ಹೋರಾಟಕ್ಕೆ ರವಿವಾರದಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ಗೋಕಾಕ ತಾಲೂಕ ಘಟಕದ ವತಿಯಿಂದ ಬೆಂಬಲ ಸೂಚಿಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿಲಾಯಿತು
ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹಾಗೂ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಡಾ. ಕೆಂಪಣ್ಣ ಚೌಕಶಿ ಅವರು ಪೌರ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದು ರಾಜ್ಯ ಸರ್ಕಾರ ಈ ಕೂಡಲೇ ಪೌರ ಕಾರ್ಮಿಕರ ಬೇಡಿಕೆಗಳನ್ನು ಆದಷ್ಟು ಬೇಗ ಪರಿಹರಿಸಬೇಕು ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ನಂತರ ಮಾತನಾಡಿದ ಕರವೇ ಸಂತೋಷ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ ಅವರು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಹಲವಾರು ಬೇಡಿಕೆಗಳು ಸುಮಾರು ವರ್ಷಗಳಿಂದ ಬಾಕಿ ಉಳಿದಿದ್ದು ಸದರಿ ಈ ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಸಂಬಧ ಪಟ್ಟ ಇಲಾಖೆ ಸಚಿವರು ಗಮನ ಹರಿಸಿ ಇವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕ ರಾಜ್ಯಾಧ್ಯಕ್ಷ ಕೆ.ಕೆ ಪಟ್ಟಣಶೆಟ್ಟಿ,ಕನ್ನಡ ಸೇನೆ ಗೋಕಾಕ ತಾಲೂಕಾಧ್ಯಕ್ಷ ಅಪ್ಪಾಸಾಹೇಬ ಮುಲ್ಲಾ, ಕನ್ನಡ ರಕ್ಷಣಾ ವೇದಿಕೆ ಮೂಡಲಗಿ ತಾಲೂಕಾ ಉಸ್ತುವಾರಿ ಅಧ್ಯಕ್ಷ ರಾಘವೇಂದ್ರ ಕುಡೆಮ್ಮೆ,ಮೂಡಲಗಿ ತಾಲೂಕ ಉಪಾಧ್ಯಕ್ಷ ಶಿವರಾಜ ಚಿಗದೊಳ್ಳಿ,ಕರವೇ ಘಟಪ್ರಭಾ ನಗರ ಘಟಕ ಅಧ್ಯಕ್ಷ ಯಲ್ಲಪ್ಪ ಅಟ್ಟಿಮಿಟ್ಟಿ, ಹಾಗೂ ಅನೇಕ ಸಂಘಟನೆ ಕಾರ್ಯಕರ್ತರು ಮತ್ತು ಸಿಬ್ಬಂದಿ ವರ್ಗದವರಾದ ರಮೇಶ ತಂಗೆವ್ವಗೋಳ,ನಿಜಲಿಗೇಶ್ವರ ಮಾಲದಿನ್ನಿ,ಮಹಾಂತೇಶ್ ದೊಡ್ಡಲಿಂಗಪ್ಪಗೊಳ ಹಾಗೂ ಎಲ್ಲ ಪೌರ ಕಾರ್ಮಿಕರು ಉಪಸ್ಥಿತರಿದ್ದರು,

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ