ಸನ್ 2025-26ನೇ ಸಾಲಿನ ಅತೀವೃಷ್ಟಿ/ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ.
ತಾಲೂಕ ಪಂಚಾಯತ ಸಭಾ ಭವನದಲ್ಲಿ ಸವದತ್ತಿ-ಯರಗಟ್ಟಿ ತಾಲೂಕಿನಲ್ಲಿ ಪ್ರವಾಹದ ಮುನ್ಸೂಚನೆ ಕಂಡು ಬರುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಂದು ಸವದತ್ತಿ ತಾಲೂಕಾ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಲಾಯಿತು.
ಮುಂಗಾರುಪೂರ್ವ ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸುವುದರ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮತ್ತು ವಿವಿಧ ಇಲಾಖೆಗಳು ಕೈಗೊಂಡಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಹಾಗೂ ಸಭೆಯಲ್ಲಿ ಕೋವಿಡ್ ಮುಂಜಾಗೃತಾ ಕ್ರಮಗಳ ಬಗ್ಗೆಯು ಸಹ ಪರಿಶಿಲನೆ ಮಾಡಲಾಯಿತು
ಈ ಸಂಧರ್ಭದಲ್ಲಿ ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಬೆಳಗಾವಿ ಇವರಿಂದ ನಿಯೋಜನೆಗೊಂಡ ತಾಲೂಕಾ ನೋಡಲ್ ಅಧಿಕಾರಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.