Breaking News

ಭೂಕುಸಿತ ಭೀತಿ: ಜಿಲ್ಲೆಯ ಈ ನಾಲ್ಕು ಪ್ರದೇಶಗಳು ಅತಿ ಅಪಾಯಕಾರಿ: ಸಮಿಕ್ಷಾ ವರದಿಯಲ್ಲಿ ಬಹಿರಂಗ

Spread the love

ಕಳೆದ ವರ್ಷ ಮಳೆಗಾಲದಲ್ಲಿ ಶಿರೂರು ಕುಡ್ದ ಕುಸಿತ ದುರಂತದ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕುಸಿತದ ಭೀತಿ ಎದುರಾಗಿದೆ.

ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಪ್ರದೇಶಗಳು ಸೂಕ್ಷ್ಮ ಪ್ರದೇಶಗಳು ಎಂದು ಗುರುತಿಸಲಾಗಿದ್ದು ಇಲ್ಲಿ ಜಿಎಸ್ ಐ ಸಮೀಕ್ಷೆ ನಡೆಸಿದ್ದು, ಆತಂಕಕಾರಿ ವರದಿ ಬಹಿರಂಗವಾಗಿದೆ. ನಾಲ್ಕು ಪ್ರದೇಶಗಳಲ್ಲಿ ಯಾವಾಗ ಬೇಕಾದರೂ ಭೂಕುಸಿತ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ವರದಿಯಲ್ಲಿ ಕುಮಟಾ ತಾಲೂಕಿನ ಬರ್ಗಿಯ ಕರಿಗದ್ದೆ, ಕುಮಟಾ ತಾಲೂಕಿನ ಗೋಕರ್ಣ ಭಾಗದ ತೊರ್ಕೆ ಗ್ರಾಮ, ಹೊನ್ನಾವರದ ಆಲಂಕಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ರೆಸಿಡೆನ್ಸಿಯಲ್ ಸ್ಕೂಲ್, ಯಲ್ಲಾಪುರದ ಕೊಡ್ಲಗದ್ದೆ ಭಾಗದಲ್ಲಿ ಮಣ್ಣು ಹೆಚ್ಚು ಸಡಿಲವಾಗಿದೆ. ಈ ಭಾಗದಲ್ಲಿ ಯಾವಾಗ ಬೇಕಾದರೂ ಮಣ್ಣು ಕುಸಿಯುವ ಆತಂಕ ಇದೆ ಎಂದು ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ